ಬೆಳಗಾವಿ : ರೈಲ್ವೆ ಇಲಾಖೆ ರಾಜ್ಯ ಸಚಿವರಾಗಿದ್ದ ದಿವಂಗತ ಸುರೇಶ್ ಅಂಗಡಿ ಅವರಿಗೆ ಬೆಳಗಾವಿಯ ವಿಶ್ವೇಶ್ವರಯ್ಯ ನಗರದ ನಿವಾಸದಲ್ಲಿ ಗಣ್ಯರು ಇಂದು ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು.
ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ದಂಪತಿ, ಶಾಸಕ ಅನಿಲ್ ಬೆನಕೆ, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಪೊಲೀಸ್ ಆಯುಕ್ತ ತ್ಯಾಗರಾಜನ್, ಡಿಸಿಪಿ ವಿಕ್ರಮ್ ಆಮಟೆ, ಬೆಳಗಾವಿ ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಶಶಿಧರ್ ಕುರೇರ್, ಮಹಾನಗರ ಪಾಲಿಕೆಯ ಆಯುಕ್ತ ಜಗದೀಶ್ ಕೆ.ಎಚ್. ಸೇರಿದಂತೆ ಅನೇಕ ಗಣ್ಯರು ಅಗಲಿದ ನಾಯಕ ಸುರೇಶ್ ಅಂಗಡಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಿದರು.
ಈ ವೇಳೆ ದಿವಂಗತ ಸುರೇಶ್ ಅಂಗಡಿ ಅವರ ಪತ್ನಿ, ಮಕ್ಕಳು ಹಾಗೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.