ಬೆಳಗಾವಿ: ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾದ ಸೋಂಕಿತರು ತಮ್ಮ ಬಟ್ಟೆ ಬ್ಯಾಗ್ಗಳನ್ನು ಜೊತೆಗೆ ಒಯ್ಯದೆ ಆಸ್ಪತ್ರೆ ಆವರಣದಲ್ಲೇ ಬಿಟ್ಟು ಹೋಗಿದ್ದಾರೆ.
ಇದು ಆತಂಕಕ್ಕೆ ಎಡೆಮಾಡಿಕೊಟ್ಟಿದ್ದು, ಸಾಮಾನ್ಯ ರೋಗಿಗಳು ಕೂಡ ಆಸ್ಪತ್ರೆಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಮೂರು ದಿನಗಳ ಹಿಂದೆ 38 ಕೊರೊನಾ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದರು. ಅವರಲ್ಲಿ ಕೆಲವರು ಈ ರೀತಿ ಮಾಡಿದ್ದಾರೆ.
ಒಂದೆಡೆ ಸಿಬ್ಬಂದಿ ನಿರ್ಲಕ್ಷ್ಯ, ಮತ್ತೊಂದೆಡೆ ಗುಣಮುಖರಾದವರ ಬೇಜವಾಬ್ದಾರಿತನ ಈ ಅವಾಂತರಕ್ಕೆ ಕಾರಣವಾಗಿದೆ ಎನ್ನಲಾಗಿದೆ. ಆಸ್ಪತ್ರೆ ಆಡಳಿತ ಮಂಡಳಿ ವಿರುದ್ಧ ಇತರೆ ರೋಗಿಗಳ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.