ETV Bharat / state

ಬೆಳಗಾವಿಯಲ್ಲಿ ಅಕಾಲಿಕ ಮಳೆಗೆ ಇಬ್ಬರು ಸಾವು; 5,367 ಹೆಕ್ಟೇರ್ ಪ್ರದೇಶದಲ್ಲಿ ಭತ್ತಕ್ಕೆ ಹಾನಿ

ಬೆಳಗಾವಿ, ಖಾನಾಪುರ ತಾಲೂಕಿನಲ್ಲಿ 5,367 ಹೆಕ್ಟೇರ್ ಪ್ರದೇಶದಲ್ಲಿ ಭತ್ತಕ್ಕೆ ಹಾನಿಯಾದ ಬಗ್ಗೆ ಪ್ರಾಥಮಿಕ ಮಾಹಿತಿ ಸಿಕ್ಕಿದೆ. ಮೂರು ದಿನದಲ್ಲಿ ಜಂಟಿ ಸರ್ವೇ ಮಾಡಲು ಸೂಚನೆ ನೀಡಲಾಗಿದೆ.‌ ಅಥಣಿ ತಾಲೂಕಿನಲ್ಲಿ ‌500 ಹೆಕ್ಟೇರ್ ಪ್ರದೇಶದಲ್ಲಿ ದ್ರಾಕ್ಷಿ ನಾಶವಾಗಿದೆ ಎಂದು ಡಿಸಿ ಆರ್.ವೆಂಕಟೇಶ ಕುಮಾರ್‌ ಮಾಹಿತಿ ನೀಡಿದರು.

5,367 ಹೆಕ್ಟರ್ ಪ್ರದೇಶದಲ್ಲಿ ಭತ್ತ ಹಾನಿ
5,367 ಹೆಕ್ಟರ್ ಪ್ರದೇಶದಲ್ಲಿ ಭತ್ತ ಹಾನಿ
author img

By

Published : Nov 22, 2021, 4:19 PM IST

ಬೆಳಗಾವಿ: ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಸುರಿಯುತ್ತಿರುವ ಅಕಾಲಿಕ ಮಳೆಗೆ ಇಬ್ಬರು ಮೃತಪಟ್ಟಿದ್ದಾರೆ. 5,367 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಹಾಗೂ 500 ಹೆಕ್ಟೇರ್ ಪ್ರದೇಶದ ದ್ರಾಕ್ಷಿ ನಾಶವಾಗಿದೆ ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ್‌ ವಿವರಿಸಿದರು.

ನಗರದಲ್ಲಿ ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ಬೆಳಗಾವಿ ಜಿಲ್ಲೆಯಲ್ಲಿ ವಾಡಿಕೆಗಿಂತ ಶೇ.230ರಷ್ಟು ಹೆಚ್ಚು ಮಳೆಯಾಗಿದೆ. ನವೆಂಬರ್ 1ರಿಂದ 20ರವರೆಗೆ ವಾಡಿಕೆಯಂತೆ 21 ಮಿ.ಮೀ ಮಳೆ ಆಗಬೇಕಿತ್ತು. ಈ ಅವಧಿಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ 61 ಮಿ.ಮೀ ಮಳೆಯಾಗಿದೆ. ಬೆಳಗಾವಿ, ಖಾನಾಪುರ ತಾಲೂಕಿನಲ್ಲಿ 5,367 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಹಾನಿ ಬಗ್ಗೆ ಪ್ರಾಥಮಿಕ ಮಾಹಿತಿ ಸಿಕ್ಕಿದೆ. ಮೂರು ದಿನದಲ್ಲಿ ಜಂಟಿ ಸರ್ವೇ ಮಾಡಲು ಸೂಚನೆ ನೀಡಲಾಗಿದೆ.‌ ಅಥಣಿ ತಾಲೂಕಿನಲ್ಲಿ ‌500 ಹೆಕ್ಟೇರ್ ಪ್ರದೇಶದಲ್ಲಿ ದ್ರಾಕ್ಷಿ ನಾಶವಾಗಿದೆ ಎಂದರು.

ಜಿಲ್ಲೆಯಲ್ಲಿ ಮಳೆಗೆ 32 ಮನೆಗಳಿಗೆ ಪೂರ್ಣ ಪ್ರಮಾಣದಲ್ಲಿ ಹಾನಿಯಾದರೆ, 239 ಮನೆಗಳಿಗೆ ಭಾಗಶಃ ಹಾನಿಯಾಗಿವೆ. ಇಬ್ಬರು ಮೃತಪಟ್ಟಿದ್ದಾರೆ. ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದ ಸುಹಾನಾ ಸನದಿ (12) ಹಾಗೂ ಮೂಡಲಗಿ ತಾಲೂಕಿನ ಮುನ್ಯಾಳ ಗ್ರಾಮದ ಭೀಮಪ್ಪ ಗೋಣಿ (64) ಪ್ರಾಣ ಕಳೆದುಕೊಂಡಿದ್ದಾರೆ.

ರಾಮದುರ್ಗ, ಮೂಡಲಗಿ ತಾಲೂಕಿನಲ್ಲಿ ತಲಾ ಒಂದು ಜಾನುವಾರು ಸಾವನ್ನಪ್ಪಿದೆ. ಬೆಳಗಾವಿ ‌ತಾಲೂಕಿನಲ್ಲಿ 11 ಶಾಲಾ ಕೊಠಡಿಗಳಿಗೆ ಹಾನಿಯಾಗಿವೆ. ನವೆಂಬರ್ 25, 26ರಂದು ಮಳೆ ಬರುವ ಬಗ್ಗೆ ಸೂಚನೆ ‌ಇದೆ. ಎಲ್ಲ ಅಧಿಕಾರಿಗಳಿಗೆ ಮುನ್ನೆಚ್ಚರಿಕೆ ಕ್ರಮ‌ ವಹಿಸಲು ಸೂಚನೆ ನೀಡಿದ್ದೇನೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.