ಬೆಳಗಾವಿ: ಕಿತ್ತೂರು ಹೊರವಲಯದಲ್ಲಿ ತಡರಾತ್ರಿ ನಡೆದ ಜೋಡಿ ಕೊಲೆ ಪ್ರಕರಣದ ಹಂತಕರನ್ನು ಶೀಘ್ರ ಬಂಧಿಸುತ್ತೇವೆ ಎಂದು ಎಸ್ಪಿ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದರು.
ಘಟನಾ ಸ್ಥಳ ಪರಿಶೀಲಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆಟ್ರೋಲ್ ಬಂಕಿನಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರನ್ನು ಕೊಡಲಿಯಿಂದ ಹೊಡೆದು ಹತ್ಯೆಗೈಯಲಾಗಿದೆ. ಹತ್ಯೆಯ ಬಳಿಕ ಕ್ಯಾಶ್ ಕೌಂಟರ್ನಲ್ಲಿದ್ದ ಹಣ ಎಗರಿಸಿ ಪರಾರಿಯಾಗಿದ್ದಾರೆ. ಇದು ಮೇಲ್ನೋಟಕ್ಕೆ ಲಾಭಕ್ಕಾಗಿ ನಡೆದ ಕೊಲೆಯಾಗಿದೆ ಎಂದರು. ಸದ್ಯ ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ ನಡೆಸಲಾಗುತ್ತಿದೆ. ಪ್ರಕರಣ ಭೇದಿಸಲು ವಿಶೇಷ ತಂಡ ರಚಿಸಲಾಗಿದ್ದು, ಶೀಘ್ರವೇ ಹಂತಕರ ಬಂಧನವಾಗಲಿದೆ ಎಂದರು.