ಬೆಳಗಾವಿ: ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ ಹಿನ್ನೆಲೆ, ನೂತನ ಜಿಲ್ಲಾಧಿಕಾರಿಯಾಗಿ ಡಾ.ಕೆ.ಹರೀಶ್ ಕುಮಾರ್ ಅಧಿಕಾರ ಸ್ವೀಕರಿಸಿದರು.
ನಿಕಟಪೂರ್ವ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅಧಿಕಾರ ಹಸ್ತಾಂತರಿಸಿ, ಶುಭ ಕೋರಿದರು. ನೂತನ ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಈ ಮೊದಲು ಬೆಂಗಳೂರಿನ ಉದ್ಯೋಗ ಮತ್ತು ತರಬೇತಿ ಕೇಂದ್ರದ ಆಯುಕ್ತರಾಗಿದ್ದರು.
ಓದಿ : ಬೆಳಗಾವಿ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮಾರ್ಚ್ 30 ಕೊನೆ, ಏಪ್ರಿಲ್ 17ಕ್ಕೆ ಮತದಾನ
ನಿರ್ಗಮಿತ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಗೆ ಯಾವುದೇ ಸ್ಥಳ ನಿಗದಿಪಡಿಸಿಲ್ಲ. ಅಧಿಕಾರ ಸ್ವೀಕರಿಸಿದ ಬಳಿಕ ನೂತನ ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್, ನಗರದ ಚೆನ್ನಮ್ಮ ವೃತ್ತದ ಬಳಿಯ ಗಣೇಶ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.