ETV Bharat / state

ಫೆಬ್ರವರಿಯಲ್ಲಿ ಕೆಎಲ್ಇ ಕ್ಯಾನ್ಸರ್ ಆಸ್ಪತೆ ಲೋಕಾರ್ಪಣೆ: ಡಾ. ಪ್ರಭಾಕರ ಕೋರೆ

ಬೆಳಗಾವಿಯಲ್ಲಿ ನಿರ್ಮಾಣವಾಗುತ್ತಿರುವ ಕೆಎಲ್​ಇ ಕ್ಯಾನ್ಸರ್​ ಆಸ್ಪತ್ರೆಯ ಕಾಮಗಾರಿಯನ್ನು ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಪರಿಶೀಲಿಸಿದರು.

Dr Prabhakar Kore Inspected KLE Cancer Hospital Constuction work
ಕೆಎಲ್ಇ ಕ್ಯಾನ್ಸರ್ ಆಸ್ಪತೆ
author img

By

Published : Jul 20, 2021, 1:47 PM IST

ಬೆಳಗಾವಿ: ಮುಂದಿನ ಫೆಬ್ರವರಿಯಲ್ಲಿ ಅತ್ಯಾಧುನಿಕ ಸೌಲಭ್ಯಗಳುಲ್ಲ, ಸುಸಜ್ಜಿತ ಕ್ಯಾನ್ಸರ್​ ಆಸ್ಪತ್ರೆಯನ್ನು ಜನಸೇವೆಗೆ ಅರ್ಪಿಸಲಾಗುವುದು ಎಂದು ಕೆಎಲ್‍ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ತಿಳಿಸಿದರು.

ಕೆಎಲ್‍ಇ ಆಸ್ಪತ್ರೆಯ ಹಿಂಬದಿಯಲ್ಲಿ ನಿರ್ಮಿಸಲಾಗುತ್ತಿರುವ ಕ್ಯಾನ್ಸರ್​ ಆಸ್ಪತ್ರೆಯ ಕಟ್ಟಡದ ಕಾಮಗಾರಿ ಪರಿಶೀಲಿಸಿ ಅವರು ಮಾತನಾಡಿದರು. 200 ಕೋಟಿ ರೂಪಾಯಿ ವೆಚ್ಚದಲ್ಲಿ 200 ಹಾಸಿಗೆಗಳ ಆಸ್ಪತ್ರೆಯನ್ನು ನಿರ್ಮಿಸಲಾಗುತ್ತಿದೆ. ಕಟ್ಟಡದ ಕಾಮಗಾರಿ ಈ ವರ್ಷಾಂತ್ಯದ ವೇಳೆಗೆ ಪೂರ್ಣಗೊಳ್ಳಲಿದೆ. ಮುಂದಿನ ಫೆಬ್ರವರಿ ವೇಳೆಗೆ ಸಂಪೂರ್ಣ ಕಾಮಗಾರಿ ಮುಗಿಸಿ, ಆಸ್ಪತ್ರೆಯನ್ನು ಜನಸೇವೆಗೆ ಅರ್ಪಿಸಲಾಗುವುದು ಎಂದರು.

ಈಗಾಗಲೇ ನಿತ್ಯ 40ಕ್ಕೂ ಅಧಿಕ ಹೊರ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಆಸ್ಪತ್ರೆಯಲ್ಲಿ ಕ್ಯಾನ್ಸರ್​ ಸಂಬಂಧಿತ ಎಲ್ಲಾ ರೀತಿಯ ಚಿಕಿತ್ಸೆ ನೀಡಲಾಗುವುದು. 100ಕ್ಕೂ ಅಧಿಕ ರೋಗಿಗಳಿಗೆ ಕಿಮೋಥೆರಪಿ ನೀಡಬಹುದು. ಕ್ಯಾನ್ಸರ್ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವುದರೊಂದಿಗೆ ಉದ್ಯೋಗ ಸೃಷ್ಟಿಯೂ ಆಗಲಿದೆ. ಉತ್ತರ ಕರ್ನಾಟಕ, ಗೋವಾ ಹಾಗೂ ದಕ್ಷಿಣ ಮಹಾರಾಷ್ಟ್ರ ಭಾಗದ ಪ್ರಥಮ ಅತ್ಯಾಧುನಿಕ ಕ್ಯಾನ್ಸರ್ ಆಸ್ಪತ್ರೆ ಇದಾಗಲಿದೆ ಎಂದು ಕೋರೆ ಇದೇ ವೇಳೆ ಸ್ಪಷ್ಟಪಡಿಸಿದರು.

ಓದಿ : ವಿಟಿಯು ವ್ಯಾಪ್ತಿಯ ಕಾಲೇಜುಗಳಲ್ಲಿ ಕನ್ನಡದಲ್ಲೇ ಇಂಜಿನಿಯರಿಂಗ್ ಕೋರ್ಸ್​: ಪ್ರೊ.ಕರಿಸಿದ್ದಪ್ಪ

ಸದ್ಯಕ್ಕೆ, ರೆಡಿಯೋಥೆರಪಿ ನೀಡಲು 3 ಯಂತ್ರೋಪಕರಣ ಹಾಗೂ ಶಸ್ತ್ರಚಿಕಿತ್ಸೆಗೆ ಅಗ್ಯತವಿರುವ ಅತ್ಯಾಧುನಿಕ ಕೊಠಡಿ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಕಲ್ಪಿಸಲಾಗುತ್ತದೆ. ಪ್ರಸ್ತುತ ಪ್ರತಿ ತಿಂಗಳು ಸುಮಾರು 130ಕ್ಕೂ ಅಧಿಕ ರೋಗಿಗಳು ಹೊಸದಾಗಿ ಕಂಡು ಬರುತ್ತಿದ್ದಾರೆ. ಅವರಿಗೆ ಒಂದೇ ಸೂರಿನಡಿ ಕ್ಯಾನ್ಸರ್ ಸಂಬಂಧಿತ ಎಲ್ಲ ವಿಧವಾದ ಚಿಕಿತ್ಸೆ ನೀಡಲು ಈ ಆಸ್ಪತ್ರೆ ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಕ್ಯಾನ್ಸರ್​ ರೋಗಿಗಳಿಗೆ ಸೂಕ್ತ ಚಿಕಿತ್ಸೆ ದೊರೆಯಲಿಲ್ಲ ಎಂಬ ಮಾತು ಕೇಳಿ ಬರಬಾರದು. ಅದಕ್ಕಾಗಿ ಈ ಭಾಗದಲ್ಲಿ ಬೃಹತ್ ಆಸ್ಪತ್ರೆ ನಿರ್ಮಿಸಲಾಗುತ್ತಿದೆ. ಈಗಾಗಲೇ ಶೇ. 50ರಷ್ಟು ಕಾಮಗಾರಿ ಮುಗಿದಿದ್ದು, ಇನ್ನುಳಿದ ಕಾಮಗಾರಿಯನ್ನು ಬೇಗ ಮುಗಿಸಬೇಕೆಂದು ಗುತ್ತಿದಾರರಿಗೆ ಸೂಚಿಸಿರುವುದಾಗಿ ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.