ಅಥಣಿ: ಡಿವೈಎಸ್ಪಿ ಎಸ್.ವಿ.ಗಿರೀಶ್ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣಕ್ಕೆ ಭದ್ರತೆಗಾಗಿ ಆಗಮಿಸಿದ್ದ ಕೆಎಸ್ಆರ್ಪಿ ಸಿಬ್ಬಂದಿ ಮತ್ತು ಅಥಣಿ ಪೊಲೀಸ್ ಠಾಣೆಯ ಸಿಬ್ಬಂದಿಗೆ ಸ್ವಚ್ಛತೆಯ ಕುರಿತು ಮಾಹಿತಿ ನೀಡಿದರು.
ಕರ್ತವ್ಯದ ವೇಳೆ ಪೊಲೀಸ್ ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಶಾಂತಿ, ಸುವ್ಯವಸ್ಥೆಗೆ ಅನುಕೂಲ ಕಲ್ಪಿಸಲು ಬಂದವರು ಮೊದಲು ಆರೋಗ್ಯವಂತರಾಗಿರಿ, ಆಗ ಮಾತ್ರ ಸರಿಯಾಗಿ ಕೆಲಸ ನಿರ್ವಹಿಸಲು ಸಾಧ್ಯವಾಗುತ್ತದೆ ಎಂದು ಅವರು ಕಿವಿಮಾತು ಹೇಳಿದರು.