ಬೆಳಗಾವಿ: ಜಿಲ್ಲಾ ಸ್ವೀಪ್ ಸಮಿತಿ ಹಾಗೂ ನಗರದ ವಿವಿಧ ಬಿಎಡ್ ಕಾಲೇಜುಗಳ ವತಿಯಿಂದ ನೂರಾರು ವಿದ್ಯಾರ್ಥಿಗಳಿಂದ ಇಂದು ನಗರದಲ್ಲಿ ಮತದಾರರ ಜಾಗೃತಿ ಜಾಥಾ ನಡೆಯಿತು.
ಜಾಗೃತಿ ಜಾಥಾಗೆ ಚಾಲನೆ ನೀಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ರಾಜೇಂದ್ರ ಕೆ.ವಿ. ಮಾತನಾಡಿ, ಭ್ರಷ್ಟಾಚಾರ ನಿರ್ಮೂಲನೆ ಹಾಗೂ ಸಮರ್ಥ ಭಾರತ ನಿರ್ಮಾಣಕ್ಕೆ ಮತದಾನವೇ ಪ್ರಮುಖ ಅಸ್ತ್ರವಾಗಿದೆ. ಪ್ರತಿಯೊಬ್ಬರೂ ತಪ್ಪದೆ ತಮ್ಮ ಹಕ್ಕನ್ನು ಚಲಾಯಿಸಿಬೇಕು ಎಂದರು.
ನಗರದ ಚನ್ನಮ್ಮ ವೃತ್ತದಿಂದ ಆರಂಭಗೊಂಡ ಜಾಥಾ ವನಿತಾ ವಿದ್ಯಾಲಯ, ಖಡೇ ಬಜಾರ್, ಕಾಕತಿ ವೇಸ್ ಮೂಲಕ ಸಂಚರಿಸಿತು. ಮತದಾನದ ಕುರಿತು ಘೋಷಣೆ ಕೂಗಿ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡಿದರು.