ETV Bharat / state

ಮನೆಯಿಂದಲೇ ಮತದಾನ‌.. ಶತಾಯುಷಿಗೆ ಕರೆ ಮಾಡಿ ಅಭಿನಂದಿಸಿದ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್‌ - Election Commission of India

ಮನೆಯಿಂದಲೇ ಗೌಪ್ಯ ಮತದಾನವನ್ನು ಶತಾಯುಷಿ ಮಹದೇವ ಮಾಳಿ ಅವರು ಮಾಡಿದ್ದಾರೆ

Election Commissioner Rajeev Kumar
ಚುನಾವಣಾ ಆಯುಕ್ತ ರಾಜೀವ್ ಕುಮಾರ್‌
author img

By

Published : May 2, 2023, 9:44 PM IST

ಚಿಕ್ಕೋಡಿ (ಬೆಳಗಾವಿ ) : ಕರ್ನಾಟಕ ವಿಧಾನಸಭೆ – 2023 ರ ಸಾರ್ವತ್ರಿಕ ಚುನಾವಣೆ ಮೇ 10 ರಂದು ನಡೆಯಲಿದೆ. ಹೀಗಾಗಿ ಭಾರತ ಚುನಾವಣಾ ಆಯೋಗವು ಇದೇ ಮೊದಲ ಬಾರಿಗೆ ಕರ್ನಾಟಕದಲ್ಲಿ ದಿವ್ಯಾಂಗರು ಮತ್ತು 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ ಮಾಡುವುದಕ್ಕೆ ಅವಕಾಶ ನೀಡಿದೆ. ಈ ಅವಕಾಶವನ್ನು ಬಳಸಿಕೊಂಡು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಇಂಗಳಿ ಗ್ರಾಮದ 103 ವರ್ಷ ವಯಸ್ಸಿನ ವೃದ್ಧ ಮಹಾದೇವ ಮಹಾಲಿಂಗ ಮಾಳಿ ಅವರು ಸೋಮವಾರ ತಮ್ಮ ಮನೆಯಿಂದಲೇ ಮತವನ್ನು ಚಲಾಯಿಸಿದರು.

ಶತಾಯುಷಿ ಮಹಾದೇವ ಮಾಳಿ ಅವರು ಮತದಾನ ಮಾಡುವ ಮೂಲಕ ಇತರರಿಗೆ ಮಾದರಿಯಾಗಿರುವುದನ್ನು ಗಮನಿಸಿದ ಭಾರತ ಚುನಾವಣಾ ಆಯೋಗದ ಮುಖ್ಯ ಆಯುಕ್ತರಾದ ಶ್ರೀ ರಾಜೀವ್ ಕುಮಾರ್ ಅವರು, ಸ್ವತಃ ಇಂದು ಮಂಗಳವಾರ(ಮೇ 2) ಮಧ್ಯಾಹ್ನ ದೂರವಾಣಿ ಕರೆ ಮಾಡಿ ಅಭಿನಂದನೆ ತಿಳಿಸಿದರು. ಪ್ರಜಾಪ್ರಭುತ್ವದ ಹಬ್ಬವಾಗಿರುವ ಮತದಾನ ಪ್ರಕ್ರಿಯೆಯಲ್ಲಿ ಯುವ ಮತದಾರರು ಹಾಗೂ ನಗರದ ಮತದಾರರು ಭಾಗವಹಿಸಲು ಮಹಾದೇವ ಮಾಳಿ ಅವರು ಸ್ಫೂರ್ತಿಯಾಗಿದ್ದಾರೆ. ಹಿರಿಯ ನಾಗರಿಕರು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಭಾರತದ ಬುನಾದಿಯನ್ನು ಗಟ್ಟಿಗೊಳಿಸಿದ್ದಾರೆ ಎಂದು ಶ್ಲಾಘಿಸಿದರು.

ಮನೆಯಿಂದಲೇ ಮತದಾನ ಮಾಡಿದ ಮಹಾದೇವ ಮಾಳಿ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಂದು ಮತವೂ ಎಷ್ಟೊಂದು‌ ಅಮೂಲ್ಯ ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ಭಾರತ ಚುನಾವಣಾ ಆಯೋಗವು ಪ್ರತಿಯೊಬ್ಬರ ಒಳಗೊಳ್ಳುವಿಕೆ ಮತ್ತು ಪಾಲ್ಗೊಳ್ಳುವಿಕೆಯನ್ನು ಖಚಿತಪಡಿಸುವುದಕ್ಕೆ ಬದ್ಧವಾಗಿದೆ ಎಂದು ರಾಜೀವ್ ಕುಮಾರ್ ಹೇಳಿದರು.

ಮತಗಟ್ಟೆಗೆ ತೆರಳಿ ಮತದಾನ‌ ಮಾಡಲು‌ ಸಾಧ್ಯವಾಗದವರಿಗಾಗಿ ಮನೆಗೆ ಮತಗಟ್ಟೆ ಕೊಂಡೊಯ್ಯವುದಕ್ಕೆ‌ ಬದ್ಧವಾಗಿದ್ದು, 80 ವರ್ಷ ಮೇಲ್ಪಟ್ಟಿರುವವರು ಹಾಗೂ ಶೇ.40 ರಷ್ಟು ಅಂಗವೈಕಲ್ಯ ಹೊಂದಿರುವ ವಿಕಲಚೇತನರಿಗೆ ಇದೇ ಮೊದಲ‌ ಬಾರಿ ಮನೆಯಿಂದಲೇ ಮತದಾನ‌ ಮಾಡುವ ಐಚ್ಛಿಕ ಅವಕಾಶವನ್ನು ಒದಗಿಸಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಪ್ರಸಕ್ತ ವಿಧಾನ ಸಭಾ ಚುನಾವಣೆಯಲ್ಲಿ 80 ವರ್ಷ ಮೇಲ್ಪಟ್ಟಿರುವ 7362 ಕ್ಕೂ ಅಧಿಕ ಜನರು ಹಾಗೂ 1708 ವಿಕಲಚೇತನರು ಮನೆಯಿಂದಲೇ ಮತದಾನ‌ ಮಾಡಲು ಇಚ್ಛೆ ವ್ಯಕ್ತಪಡಿಸಿದ್ದಾರೆ. ಏಪ್ರಿಲ್ 29 ರಿಂದ ಮತದಾನ ಪ್ರಕ್ರಿಯೆ ಆರಂಭಗೊಂಡಿದ್ದು, ಇದುವರೆಗೆ ಬೆಳಗಾವಿ ಜಿಲ್ಲೆಯಲ್ಲಿ ಒಟ್ಟಾರೆ 6975 ಹಿರಿಯರು ಮತ್ತು 1661 ವಿಕಲಚೇತನರು ಮನೆಯಿಂದಲೇ ತಮ್ಮ ಮತವನ್ನು ಚಲಾಯಿಸಿದ್ದಾರೆ ಎಂದು ರಾಜೀವ್ ಕುಮಾರ್ ತಿಳಿಸಿದರು.

ಆಯೋಗಕ್ಕೆ ಕೃತಜ್ಞತೆ ಸಲ್ಲಿಸಿದ ಶತಾಯುಷಿ : ಸ್ವತಃ ಭಾರತ ಚುನಾವಣಾ ಆಯೋಗದ ಮುಖ್ಯ ಆಯುಕ್ತರೇ ದೂರವಾಣಿ ಕರೆ ಮಾಡಿದಾಗ ಅತ್ಯಂತ ಸಂತೋಷದಿಂದ ಮಹಾದೇವ ಮಾಳಿ ಅವರೊಡನೆ ಮಾತನಾಡಿದ್ದರು. ತಮ್ಮಂತಹ ಹಿರಿಯರಿಗೆ ಇದೇ ಪ್ರಥಮ‌ ಬಾರಿ ಮನೆಯಿಂದಲೇ ಮತದಾನ ಮಾಡುವ ಅವಕಾಶ ಕಲ್ಪಿಸಿದ ಚುನಾವಣಾ ಆಯೋಗಕ್ಕೆ‌ ಕೃತಜ್ಞತೆಗಳನ್ನು ಸಲ್ಲಿಸಿದರು. ಈ ಹಿಂದೆ ಮನೆಯಿಂದಲೇ ಮತದಾನ‌ ಮಾಡುವ ಅವಕಾಶ ಇಲ್ಲದಿರುವಾಗ ಗಾಲಿಕುರ್ಚಿಯಲ್ಲಿ ಮತಗಟ್ಟಿಗೆ ತೆರಳಿ‌ ಮತದಾನ ಮಾಡಿರುವುದನ್ನು ನೆನಪಿಸಿಕೊಂಡರು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಎಲ್ಲ ನಾಗರಿಕರು ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ‌ನಿತೇಶ್ ಪಾಟೀಲ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧಕ್ಷರಾದ ಹರ್ಷಲ್ ಭೋಯರ್, ಚಿಕ್ಕೋಡಿ-ಸದಲಾಗಾ ಚುನಾವಣಾಧಿಕಾರಿ‌ ಮಾಧವ್ ಗಿತ್ತೆ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ : ಕೊಡಗು ಕಾಂಗ್ರೆಸ್​​ನಲ್ಲಿ ಭಿನ್ನಮತ : ಮಾಜಿ ಸಚಿವ ಜೀವಿಜಯ ರಾಜೀನಾಮೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.