ಅಥಣಿ(ಬೆಳಗಾವಿ): ಹೆಸ್ಕಾಂ ನೌಕರರೊಬ್ಬರು ನೇಣಿಗೆ ಶರಣಾದ ಘಟನೆ ಅಥಣಿ ಪಟ್ಟಣದ ಹಲ್ಯಾಳ ಸರ್ಕಲ್‌ಗೆ ಹೊಂದಿಕೊಂಡಿರುವ ವಿದ್ಯುತ್ ವಿತರಣಾ ಕೇಂದ್ರದ ಆವರಣದಲ್ಲಿ ನಡೆದಿದೆ. ಮಂಜುನಾಥ ಮುತ್ತಗಿ (35) ಮೃತರೆಂದು ಗುರುತಿಸಲಾಗಿದೆ. ಗುತ್ತಿಗೆ ಆಧಾರದ ಮೇಲೆ ಅಥಣಿ ವಿದ್ಯುತ್ ಇಲಾಖೆಯಲ್ಲಿ ಇವರು ಕೆಲಸ ಮಾಡುತ್ತಿದ್ದರು.
ವಿದ್ಯುತ್ ಕಂಬಗಳನ್ನು ನೆಡುವ ಟ್ರ್ಯಾಕ್ಟರ್‌ಗೆ ಬೈಕ್ ಸಹಾಯದಿಂದ ನೇಣು ಬಿಗಿದುಕೊಂಡಿದ್ದಾರೆಂದು ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಅಥಣಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ: ಮಾನಸಿಕ ಖಿನ್ನತೆಗೊಳಗಾಗಿ ಆತ್ಮಹತ್ಯೆಗೆ ಶರಣಾದ ಎಂಬಿಬಿಎಸ್ ವಿದ್ಯಾರ್ಥಿ