ETV Bharat / state

ರೈತರ ಪಂಪ್‌ಸೆಟ್​ಗಳಿಗೆ ಲೋಡ್ ಶೆಡ್ಡಿಂಗ್ ಹೇರಿದರೆ ಉಗ್ರ ಪ್ರತಿಭಟನೆ: ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ - ಈಟಿವಿ ಭಾರತ ಕನ್ನಡ

ರೈತರ ಪಂಪ್​ಸೆಟ್​ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆಯಾಗದಿದ್ದರೆ ಉಗ್ರ ಪ್ರತಿಭಟನೆ ಕೈಗೊಳ್ಳಬೇಕಾಗುತ್ತದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಎಚ್ಚರಿಕೆ ನೀಡಿದ್ದಾರೆ.

ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ
ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ
author img

By

Published : Aug 18, 2023, 7:03 PM IST

Updated : Aug 18, 2023, 11:03 PM IST

ಈರಣ್ಣ ಕಡಾಡಿ ಹೇಳಿಕೆ

ಬೆಳಗಾವಿ: ಲೋಡ್ ಶೆಡ್ಡಿಂಗ್ ಪರಿಣಾಮವಾಗಿ ರೈತರ ಬೆಳೆಗಳು ನೀರಿಲ್ಲದೆ ಒಣಗುವ ಪರಿಸ್ಥಿತಿಗೆ ತಲುಪಿದ್ದು, ಪಂಪ್‌ಸೆಟ್​ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆಗೆ ತಕ್ಷಣ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ರೈತರೊಂದಿಗೆ ಸೇರಿ ಬಿಜೆಪಿ ರೈತ ಮೋರ್ಚಾ ವತಿಯಿಂದ ಉಗ್ರ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಐಪಿ ಸೆಟ್​ಗಳಿಗೆ ಸರಿಯಾಗಿ ವಿದ್ಯುತ್ ಪೂರೈಕೆ ಮಾಡದಿದ್ದರೆ ಈಗ ಬಿತ್ತಿರುವ ಶೇ.80ರಷ್ಟು ಬೆಳೆಗಳು ಒಣಗಿ, ಜಿಲ್ಲೆಯಲ್ಲಿ ಆಹಾರ ಉತ್ಪನ್ನಗಳ ಮೇಲೆ ದೊಡ್ಡ ಹೊಡೆತ ಬೀಳುತ್ತದೆ. ರೈತರು ಆರ್ಥಿಕವಾಗಿಯೂ ಜರ್ಜರಿತರಾಗುತ್ತಾರೆ. ಹಾಗಾಗಿ ವಿದ್ಯುತ್ ಖರೀದಿಸಲು ತಕ್ಷಣ ಸರ್ಕಾರ ಕ್ರಮ ಕೈಗೊಳ್ಳಬೇಕು.

ಈಗಾಗಲೇ ಸರ್ಕಾರ ಲೋಡ್ ಶೆಡ್ಡಿಂಗ್ ಕುರಿತು ಅಧಿಕಾರಿಗಳಿಗೆ ಮೌಖಿಕವಾಗಿ ತಿಳಿಸಿದೆ. ಒಂದು ಕಡೆ ಅನೇಕ ಘೋಷಣೆಗಳನ್ನು ಕೊಟ್ಟು ಮತ್ತೊಂದು ಕಡೆ ರೈತರನ್ನು ಕೈಬಿಡುವ ಕೆಲಸ ಆಗಬಾರದು. ಈ ಬಗ್ಗೆ ಗಮನಹರಿಸದಿದ್ದರೆ ಆಗಸ್ಟ್ ತಿಂಗಳ ಕೊನೆಯವರೆಗೆ ನೋಡಿಕೊಂಡು ಸೆಪ್ಟೆಂಬರ್ ಮೊದಲ ವಾರದಲ್ಲಿ ರಾಜ್ಯದ ಎಲ್ಲಾ ವಿದ್ಯುತ್ ಕೇಂದ್ರಗಳ ಮುಂದೆ ಬಿಜೆಪಿ ರೈತ ಮೋರ್ಚಾ ವತಿಯಿಂದ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಕೃಷಿ ಚಟುವಟಿಕೆ ದುಬಾರಿ: ಬೆಳೆ ಪರಿಹಾರ ನೀಡಲು ಇರುವ ಮಾನದಂಡಗಳು ಬದಲಾವಣೆ ಮಾಡಿದರೆ ರೈತರಿಗೆ ಹೆಚ್ಚು ಪರಿಹಾರ ಸಿಗುತ್ತದೆ. ಸದ್ಯ ಹಳೆ ಕಾಲದ ಪದ್ಧತಿ ಇದೆ. ಈಗ ಕೃಷಿ ಚಟುವಟಿಕೆ ದುಬಾರಿಯಾಗಿದೆ. ಹಾಗಾಗಿ ನಿಯಮಗಳನ್ನು ಬದಲಾಯಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಸಚಿವರಿಗೆ ನಾನು ಕೂಡ ಒತ್ತಾಯಿಸುತ್ತೇನೆ ಎಂದು ಈರಣ್ಣ ಕಡಾಡಿ ತಿಳಿಸಿದರು.

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ರಾಣಿ ಚನ್ನಮ್ಮ ಹೆಸರಿಡುವ ವಿಚಾರದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು ಯಾಕೆ ಇಚ್ಛಾಶಕ್ತಿ ತೋರಿಸುತ್ತಿಲ್ಲ ಎಂಬ ಮಾಧ್ಯಮಗಳ ಪ್ರಶ್ನೆಗೆ, ಜಿಲ್ಲೆಯ ಎಲ್ಲ ಚುನಾಯಿತ ಪ್ರತಿನಿಧಿಗಳು, ಸಂಘ-ಸಂಸ್ಥೆಗಳು ಒಟ್ಟಾಗಿ ನಿರ್ಣಯ ತೆಗೆದುಕೊಂಡರೆ ಹೆಸರಿಡಲು ಕೇಂದ್ರ ಸರ್ಕಾರದ ಮಟ್ಟದಲ್ಲಿ ನಾನು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದರು.

ಬೆಳಗಾವಿ ಜಿಲ್ಲೆಯ ವಿಭಜನೆ ವಿಚಾರದಲ್ಲಿ ಅಧಿಕಾರದಲ್ಲಿರುವ ರಾಜಕೀಯ ನಾಯಕರ ಇಚ್ಛಾಶಕ್ತಿ ಕೊರತೆಯಿಂದಾಗಿ ಹೊಸ ಜಿಲ್ಲೆಗಳ ಉದಯವಾಗಿಲ್ಲ. ಅಧಿಕಾರದಲ್ಲಿದ್ದವರು ಮನಸ್ಸು ಮಾಡಿ, ಅನೇಕ ವರದಿಗಳನ್ನು ಆಧರಿಸಿ ಹೊಸ ಜಿಲ್ಲೆಗಳು ರಚನೆಯಾದರೆ ಅದಕ್ಕೆ ನಮ್ಮ ಸಹಮತವಿದೆ. ರಾಜಕೀಯ ನಾಯಕರು ಹಾಗೂ ಸಾರ್ವಜನಿಕರ ಅಭಿಪ್ರಾಯದ ಬದಲು ಸರ್ಕಾರವೇ ನೇಮಕ ಮಾಡಿರುವ ಆಯೋಗಗಳು ಕೊಟ್ಟ ವರದಿಗಳ ಆಧಾರದ ಮೇಲೆ ನಿರ್ಣಯ ತೆಗೆದುಕೊಳ್ಳಬೇಕು.

ಹೊಸದಾಗಿ ಮೂರು ಜಿಲ್ಲೆಗಳಾಗಬೇಕು ಎಂದ ಈರಣ್ಣ ಕಡಾಡಿ, ಮೂರು ಜಿಲ್ಲೆಗಳು ಯಾವುವು ಎಂಬ ಬಗ್ಗೆ ಮಾತ್ರ ಬಹಿರಂಗಪಡಿಸಲಿಲ್ಲ. ಪಕ್ಷ ಬಯಸಿ ಲೋಕಸಭೆಗೆ ಸ್ಪರ್ಧಿಸುವಂತೆ ನನಗೆ ಆದೇಶ ನೀಡಿದರೆ ನಾನು ರಾಜ್ಯಸಭಾ ಸದಸ್ಯನಿದ್ದರೂ ಚುನಾವಣೆ ಸ್ಪರ್ಧಿಸಲು ನಾನು ಸಿದ್ಧ. ಪಕ್ಷ ಗೆಲ್ಲುವ ಸ್ಥಾನವಿದು, ಹಾಗಾಗಿ ಗೆಲ್ಲಲು ಯಾರೂ ಹಿಂದೆ ಸರಿಯುವುದಿಲ್ಲ. ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಬೀಗುತ್ತಿರುವ ಕಾಂಗ್ರೆಸ್ ನಾಯಕರನ್ನು ಲೋಕಸಭೆ ಚುನಾವಣೆಯಲ್ಲಿ ಸೋಲಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: K.H.Muniyappa: ಸದ್ಯಕ್ಕೆ ಎಪಿಎಲ್, ಬಿಪಿಎಲ್ ಕಾರ್ಡ್​ಗೆ ಅರ್ಜಿ ಸಲ್ಲಿಸಲು ಅವಕಾಶ ಇಲ್ಲ- ಸಚಿವ ಕೆ.ಹೆಚ್.ಮುನಿಯಪ್ಪ

Last Updated : Aug 18, 2023, 11:03 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.