ಬೆಳಗಾವಿ: ಜಿಲ್ಲೆಯ ಅಥಣಿ ನಗರದಲ್ಲಿ ಬಹು ನಿರೀಕ್ಷಿತ ಬಸ್ ನಿಲ್ದಾಣದ ಉದ್ಘಾಟನೆಗೆ ಕೊನೆಗೂ ಮಹೂರ್ತ ಕೂಡಿ ಬಂದಿದೆ.
ಹೊಸ ಬಸ್ ನಿಲ್ದಾಣ ಕಾಮಗಾರಿ ಮುಗಿದು ನಾಲ್ಕು ತಿಂಗಳಾದರೂ ಉದ್ಘಾಟನೆ ಮಾಡಿರಲಿಲ್ಲ. ಈ ಬಗ್ಗೆ ಈಟಿವಿ ಭಾರತ 'ಸಾರಿಗೆ ಸಚಿವರ ಸ್ವಕ್ಷೇತ್ರದಲ್ಲೇ ಬಸ್ ನಿಲ್ದಾಣ ಉದ್ಘಾಟನೆಗೆ ವಿಳಂಬ ನೀತಿ' ಎಂಬ ಶೀರ್ಷಿಕೆಯಡಿ ಸುದ್ದಿ ಪ್ರಸಾರ ಮಾಡುತ್ತಿದ್ದಂತೆ ಜಿಲ್ಲಾಡಳಿತ ಎಚ್ಚೆತ್ತು, ಅಥಣಿಯ ಹೃದಯಭಾಗದಲ್ಲಿ ಇರುವ ಬಸ್ ನಿಲ್ದಾಣ ಉದ್ಘಾಟನೆಗೆ ಸಿದ್ಧತೆ ಮಾಡಿದೆ.
ಇದೇ ತಿಂಗಳ 25 ರಂದು 11:00 ಗಂಟೆಗೆ ಅಥಣಿ ಬಸ್ ನಿಲ್ದಾಣ ಉದ್ಘಾಟನೆಗೊಳ್ಳಲಿದೆ. ಉದ್ಘಾಟನೆಗೆ ಸಾರಿಗೆ ಸಚಿವ ಮತ್ತು ಬಳ್ಳಾರಿ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಆಗಿರುವ ಲಕ್ಷ್ಮಣ್ ಸವದಿ ಆಗಮಿಸಲಿದ್ದಾರೆ.