ETV Bharat / state

ಬೆಳಗಾವಿಯಲ್ಲಿ ರಾತ್ರೋರಾತ್ರಿ ಕೊರೊನಾ ಶಂಕಿತ ಕುಟುಂಬಗಳ ಸ್ಥಳಾಂತರ

ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಶಂಕಿತ ಕುಟುಂಬಗಳನ್ನು ರಾತ್ರೋರಾತ್ರಿ ಆಂಬ್ಯುಲೆನ್ಸ್ ಮೂಲಕ ಸ್ಥಳಾಂತರ ಮಾಡಿ ಕ್ವಾರಂಟೈನ್​ನಲ್ಲಿ ಇಡಲಾಗಿದೆ.

Evacuation of Corona suspected families overnight in Belgaum
ಬೆಳಗಾವಿಯಲ್ಲಿ ರಾತ್ರೋರಾತ್ರಿ ಕೊರೊನಾ ಶಂಕಿತ ಕುಟುಂಬಗಳ ಸ್ಥಳಾಂತರ
author img

By

Published : Apr 18, 2020, 12:54 PM IST

ಬೆಳಗಾವಿ: ಜಿಲ್ಲೆಯಲ್ಲಿ ಕೊರೊನಾ ‌ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ನಗರದ ಶಂಕಿತ ಕುಟುಂಬಗಳನ್ನು ರಾತ್ರೋರಾತ್ರಿ ಸ್ಥಳಾಂತರ ಮಾಡಲಾಯಿತು.

ನಗರದಲ್ಲಿ ಈವರೆಗೆ ಒಟ್ಟು ಆರು ಜನರಲ್ಲಿ ಕೊರೊನಾ ಪಾಸಿಟಿವ್ ಬಂದಿವೆ. ನಿನ್ನೆಯಷ್ಟೇ ಸೋಂಕಿತ ವ್ಯಕ್ತಿಯೊಂದಿಗೆ ಸಂಪರ್ಕ ಹೊಂದಿದ್ದ ಇಲ್ಲಿನ ಸಂಗಮೇಶ್ವರ ನಗರದ ಐವರಲ್ಲಿ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಹೀಗಾಗಿ ರಾತ್ರೋರಾತ್ರಿ ಸೋಂಕಿತರ ಕುಟುಂಬ, ಸಂಬಂಧಿಗಳನ್ನು ‌ಆಂಬ್ಯುಲೆನ್ಸ್ ಮೂಲಕ ಕರೆದೊಯ್ದು ಕ್ವಾರಂಟೈನ್ ಮಾಡಲಾಯಿತು. ಸಂಗಮೇಶ್ವರ ನಗರದಲ್ಲಿ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಆಝಂ ನಗರ, ಶಾಹಿನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳನ್ನು ನಿಷೇಧಿತ ಪ್ರದೇಶಗಳೆಂದು ಘೋಷಿಸಲಾಗಿದೆ. ಅಲ್ಲದೇ ಈ ಎಲ್ಲಾ ಪ್ರದೇಶಗಳಲ್ಲಿ ಸ್ಯಾನಿಟೈಸರ್ ಸಿಂಪಡಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.