ಚಿಕ್ಕೋಡಿ : ಸಚಿವ ಸ್ಥಾನ ಹೋಗುತ್ತೆ ಅನ್ನೋದು ಊಹಾಪೋಹ, ಸಿಎಂ ಯಡಿಯೂರಪ್ಪ ವಿದೇಶ ಪ್ರವಾಸದಿಂದ ಬಂದ ಬಳಿಕ ಸಚಿವ ಸಂಪುಟ ವಿಸ್ತರಣೆ ಆಗುತ್ತೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಜೊಲ್ಲೆ ಹೇಳಿದ್ದಾರೆ.
ಚಿಕ್ಕೋಡಿ ಪಟ್ಟಣದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಪ್ರತಿಕ್ರಿಯಿಸಿದ ಅವರು, ನಿನ್ನೆ ಅಮಿತ್ ಶಾ ಭೇಟಿಯಾದಾಗ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಯಾವುದೇ ಮಾತನಾಡಿಲ್ಲ. ಕಾಗವಾಡ, ಅಥಣಿ ಶಾಸಕರಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆ ಇದೆ ಎಂದರು.
ಈ ಬಗ್ಗೆ ನನಗೆನೂ ಗೊತ್ತಿಲ್ಲ ಹೈಕಮಾಂಡ್ ಹಾಗೂ ಸಿಎಂ ಅವರು ಒಳ್ಳೆಯ ರೀತಿ ನ್ಯಾಯ ಕೊಡುವಂತೆ ಸಂಪುಟ ವಿಸ್ತರಣೆ ಮಾಡುತ್ತಾರೆ ಎಂದು ಹೇಳಿದರು.