ಚಿಕ್ಕೋಡಿ : ಬಜೆಟ್ ಮೇಲೆ ಹಲವಾರು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದು ಮಲತಾಯಿ ಧೋರಣೆ ತೋರದೆ ಆದ್ಯತೆ ನೀಡಬೇಕು ಎಂದು ಚಿಕ್ಕೋಡಿ ಉಪವಿಭಾಗದ ಜನತೆ ಆಗ್ರಹಿಸಿದ್ದಾರೆ.
ಚಿಕ್ಕೋಡಿ ಉಪವಿಭಾಗದಲ್ಲಿ ಸರ್ಕಾರಿ ವೈದ್ಯಕೀಯ, ಇಂಜಿನಿಯರಿಂಗ್ ಕಾಲೇಜುಗಳನ್ನು ಸ್ಥಾಪಿಸಿ ಈ ಭಾಗದ ಜನರಿಗೆ ಅನುಕೂಲ ಮಾಡಿಕೊಡಬೇಕು. ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸಲು ಸರ್ಕಾರಿ ತರಬೇತಿ ಕೇಂದ್ರ ಮತ್ತು ಸರಿಯಾದ ಗ್ರಂಥಾಲಯಗಳನ್ನು ಮಂಜೂರು ಮಾಡಿ ಬಜೆಟ್ನಲ್ಲಿ ಅನುದಾನ ಒದಗಿಸಬೇಕು ಎಂದು ಕೋರಿದ್ದಾರೆ.