ಬೆಳಗಾವಿ: ವ್ಯಕ್ತಿಯೋರ್ವನಿಗೆ ಕೊರೊನಾ ಸೋಂಕು ತಗುಲಿದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವದಂತಿ ಹಬ್ಬಿಸಿದ ಯುವಕನನ್ನು ನಗರದ ಮಾಳಮಾರುತಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಹಳೆಗಾಂಧಿ ನಗರದಲ್ಲಿ ವ್ಯಕ್ತಿಯೋರ್ವನಿಗೆ ಕೊರೊನಾ ಸೋಂಕು ತಗಲಿದ್ದು, ಕೆಎಲ್ಇ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೇಘನ್ ಎಂಬಾತ ವಾಟ್ಸಪ್ ಗ್ರೂಪ್ನಲ್ಲಿ ಸುಳ್ಳು ಮಾಹಿತಿ ಹರಿಬಿಟ್ಟಿದ್ದಾನೆ ಎನ್ನಲಾಗಿದೆ.
ಈ ಹಿನ್ನೆಲೆ ಮಾಳಮಾರುತಿ ಠಾಣೆ ಪೊಲೀಸರು ಮೇಘನ್ನನ್ನು ಬಂಧಿಸಿ, ವಿಚಾರಣೆ ನಡೆಸಿದ್ದಾರೆ.