ETV Bharat / state

ಯುವಕನ ಮಿದುಳು ನಿಷ್ಕ್ರಿಯ: ಅಂಗಾಂಗ ದಾನ ಮಾಡಿದ ಕುಟುಂಬಸ್ಥರು - ಅಂಗಾಂಗ ದಾನ

ಗಂಭೀರವಾಗಿ ಗಾಯಗೊಂಡಿದ್ದ ಕಾರಣ ಕೋಮಾಗೆ ತಲುಪಿದ್ದ ಹಾಗೂ ಆತನ ಮಿದುಳು ನಿಷ್ಕ್ರಿಯಗೊಂಡಿದ್ದನ್ನು ವೈದ್ಯರು ದೃಢಪಡಿಸಿದ್ದ ಕಾರಣ ಪ್ರಶಾಂತನ ಮನೆಯವರು ಅಂಗಾಂಗ ದಾನಕ್ಕೆ ಮುಂದಾಗಿದ್ದಾರೆ.

Family members donated organs of young man
ಯುವಕನ ಅಂಗಾಂಗ ದಾನ ಮಾಡಿದ ಕುಟುಂಬಸ್ಥರು
author img

By

Published : Sep 30, 2022, 1:12 PM IST

ಅಥಣಿ: ಮನೆಯಲ್ಲಿ ಜಾರಿಬಿದ್ದು ಗಂಭೀರವಾಗಿ ಗಾಯಗೊಂಡ ಯುವಕನ ಮೆದುಳು ನಿಷ್ಕ್ರೀಯಗೊಂಡ ಹಿನ್ನೆಲೆ, ಕುಟುಂಬಸ್ಥರು ಯುವಕನ ಅಂಗಾಂಗ ದಾನ ಮಾಡಿ ಇತರರಿಗೆ ಮಾದರಿಯಾಗಿದ್ದಾರೆ. ಬೆಳಗಾವಿ ಜಿಲ್ಲೆ ಅಥಣಿ ಪಟ್ಟಣದಲ್ಲಿ ಮಂಗಳವಾರ ಪ್ರಶಾಂತ ವಿಠ್ಠಲ ಮಲ್ಲೆವಾಡಿ ಎನ್ನುವ 30 ವರ್ಷದ ಯುವಕ ಮನೆಯಲ್ಲಿ ಶೌಚಾಲಯಕ್ಕೆ ಹೋಗಿ ಮರಳಿ ಬರುವಾಗ ಕಾಲು ಜಾರಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು.

ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು‌ ಪೋಷಕರು ಅಥಣಿಯ ಅನ್ನಪೂರ್ಣ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಕಾರಣ ಕೋಮಾಗೆ ತಲುಪಿದ್ದ ಆತ ಎಷ್ಟೇ ಚಿಕಿತ್ಸೆ ನೀಡಿದರೂ ಚೇತರಿಸಿಕೊಳ್ಳಲಿಲ್ಲ. ಅಲ್ಲದೇ ಆತನ ಮಿದುಳು ಕೂಡ ನಿಷ್ಕ್ರಿಯಗೊಂಡಿದ್ದನ್ನು ವೈದ್ಯರು ದೃಢಪಡಿಸಿದ್ದರು.

ಯುವಕನ ಅಂಗಾಂಗ ದಾನ ಮಾಡಿದ ಕುಟುಂಬಸ್ಥರು

ಯುವಕನ ಪೋಷಕರು ಈ ವಿಷಯ ತಿಳಿದು ಡಾ ಅವಿನಾಶ ನಾಯ್ಕ, ರಜನ ಸೋಮಯ್ಯ ಅವರ ಸಲಹೆ ಮೇರೆಗೆ ತಮ್ಮ ಮಗನ ಅಂಗಾಂಗ ದಾನಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ನಾಲ್ಕೈದು ಜನರ ಜೀವಕ್ಕೆ ಬೆಳಕು‌ ನೀಡುವ ಮೂಲಕ, ಮಗನ ಸಾವಿನಲ್ಲೂ ಪೋಷಕರು ಸಾರ್ಥಕತೆ ಮೆರೆದಿದ್ದಾರೆ. ಮೃತ ಪ್ರಶಾಂತನ ಪೋಷಕರು‌ ಅಂಗಾಂಗ ದಾನಕ್ಕೆ ಒಪ್ಪಿಗೆ ನೀಡುತ್ತಿದ್ದಂತೆಯೇ ಬೆಳಗಾವಿ ಕೆಎಲ್ಇ ಆಸ್ಪತ್ರೆಯ ವೈದ್ಯರು ಪರಿಶೀಲಿಸಿ, ಪ್ರಶಾಂತನ ದೇಹದಿಂದ ಲೀವರ್, 2 ಕಿಡ್ನಿ, ಹೃದಯ, ಚರ್ಮ, ಕಣ್ಣುಗಳನ್ನು ಬೇರೆಯವರಿಗೆ ಹಾಕಬಹುದು ಎಂದು ಡಾ ಸಂತೋಷ ಪಾಟೀಲ ಅವರು ತಿಳಿಸಿದರು.

ಪ್ರಶಾಂತ ವಿಠ್ಠಲ ಮಲ್ಲೆವಾಡಿ ಚಿಕ್ಕ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದರೂ ಯುವಕನ ಪೋಷಕರು ಕೈಗೊಂಡ ಮಗನ ಅಂಗಾಂಗ ದಾನದ ನಿರ್ಧಾರ ನಿಜಕ್ಕೂ ಶ್ಲಾಘನೀಯ.

ಇದನ್ನೂ ಓದಿ: ಅಪಘಾತದಲ್ಲಿ ಯುವಕನ ಮೆದುಳು ನಿಷ್ಕ್ರಿಯ; ಅಂಗಾಂಗ ದಾನಕ್ಕೆ ಮುಂದಾದ ಕುಟುಂಬ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.