ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಾಸಕ ಅಭಯ್ ಪಾಟೀಲ್ ನಿವಾಸದಲ್ಲಿ ಉಪಹಾರ ಸೇವಿಸಿದರು. ಬಳಿಕ ನಿವಾಸದ ಆವರಣದಲ್ಲಿ ಕೆಲವರಿಂದ ಅಹವಾಲು ಸ್ವೀಕರಿಸಿದರು.
ಈ ವೇಳೆ ಶಾಸಕ ಅಭಯ್ ಪಾಟೀಲ್‌ಗೆ ಸಚಿವ ಸ್ಥಾನ ನೀಡುವಂತೆ ಬೆಂಬಲಿಗರು ಮನವಿ ಮಾಡಿದರು. ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿಗೆ ಹೆಚ್ಚು ಮತಗಳು ಬಂದಿವೆ. 50 ವರ್ಷಗಳಿಂದ ಗಡಿ ಸಮಸ್ಯೆ, ಭಾಷಾ ಸಮಸ್ಯೆ ಇತ್ತು. ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಿಸಿ ಅದ್ವಿತೀಯ ಕೆಲಸ ಮಾಡಿದ್ದಾರೆ. ಶಾಸಕ ಅಭಯ್ ಪಾಟೀಲ್‌ಗೆ ಸಚಿವ ಸ್ಥಾನ ನೀಡಿ ಎಂದು ಬೆಂಬಲಿಗರು ಮನವಿ ಮಾಡಿದರು.
ಅಭಯ್ ಪಾಟೀಲ್ ಬೆಂಬಲಿಗರ ಮನವಿಗೆ ಕೈ ಮುಗಿದು ಸಿಎಂ ಬೊಮ್ಮಾಯಿ ತೆರಳಿದರು.
ಓದಿ: ಬಿಎಸ್ವೈ ರಾಜ್ಯ ಪ್ರವಾಸಕ್ಕೆ ಯಾವುದೇ ತೊಂದರೆಯಿಲ್ಲ: ಸಿಎಂ ಬೊಮ್ಮಾಯಿ