ಬೆಳಗಾವಿ: ಸಾಲಬಾಧೆ ತಾಳಲಾರದೆ ರೈನನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಖಾನಾಪುರ ತಾಲೂಕಿನ ಅವರೊಳ್ಳಿ ಗ್ರಾಮದಲ್ಲಿ ನಡೆದಿದೆ.
ಕಲ್ಲಪ್ಪ ಬಾಳೆಕುಂದ್ರಿ (54) ಆತ್ಮಹತ್ಯೆ ಮಾಡಿಕೊಂಡ ರೈತ. ಈತ ತನ್ನ ಎರಡು ಎಕರೆ ಭೂಮಿಯಲ್ಲಿ ಬೆಳೆದಿದ್ದ ಮೆಣಸಿನಕಾಯಿ ಮಾರಾಟವಾಗದೇ ಇರುವುದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಕೃಷಿಗಾಗಿ ವಿವಿಧ ಬ್ಯಾಂಕ್‌ಗಳಲ್ಲಿ 5 ಲಕ್ಷ, 55 ಸಾವಿರ ರೂ. ಸಾಲ ಮಾಡಿಕೊಂಡಿದ್ದನಂತೆ. ಕಳೆದ ವರ್ಷದ ಅತಿವೃಷ್ಟಿಯಿಂದ ಭತ್ತದ ಬೆಳೆ ಕೂಡ ಕೈಕೊಟ್ಟಿತ್ತು. ಈಗ ಮತ್ತೆ ಸಾಲ ಮಾಡಿ ಮೆಣಸಿನಕಾಯಿ ಬೆಳೆದಿದ್ದ. ಆದ್ರೆ, ಕೊರೊನಾ ಭೀತಿ ಹಿನ್ನೆಲೆ ದೇಶಾದ್ಯಂತ ಲಾಕ್ಡೌನ್ಗೆ ಆದೇಶ ನೀಡಲಾಗಿದೆ. ಇದರಿಂದಾಗಿ ಮೆಣಸಿನಕಾಯಿ 5-6 ರೂ.ಗೆ ಕೆಜಿಯಂತೆ ವ್ಯಾಪಾರವಾಗುತ್ತಿದೆ. ತಾನು ಬೆಳೆದ ಬೆಳೆಗೆ ಬೆಲೆ ಸಿಗಲಿಲ್ಲವೆಂದು ನೊಂದ ರೈತ ಜಮೀನಿನಲ್ಲಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಈ ಕುರಿತು ನಂದಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾಲಬಾಧೆ ತಾಳದೆ ಖಾನಾಪುರದ ರೈತ ನೇಣಿಗೆ ಶರಣು
ಸಾಲಬಾಧೆ ತಾಳಲಾರದೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಅವರೊಳ್ಳಿ ಗ್ರಾಮದ ರೈನನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.