ಅಥಣಿ: ಬೆಳಗಾವಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಆಗಮಿಸಿದ್ದು, ಇವರ ಆಗಮನ ಖಂಡಿಸಿ ಅಥಣಿಯಲ್ಲಿ ರೈತ ಸಂಘಟನೆಗಳು ರಸ್ತೆ ತಡೆದು ಪ್ರತಿಭಟನೆ ನಡೆಸಿವೆ.
ಅಥಣಿಯ ಜೇವರ್ಗಿ-ಸಂಕೇಶ್ವರ ರಾಜ್ಯ ಹೆದ್ದಾರಿಯಲ್ಲಿರುವ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ರಸ್ತೆ ತಡೆ ನಡೆಸಿದ ರೈತರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ಹಾಗೂ ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಆಗಮನ ಖಂಡಿಸಿ ರಸ್ತೆ ತಡೆದು ಕೆಲ ಹೊತ್ತು ಪ್ರತಿಭಟನೆ ನಡೆಸಿದರು.
ಓದಿ: ಕೆಲ ಹೊತ್ತಲ್ಲೇ ಪ್ರವಾಸಿ ಮಂದಿರಕ್ಕೆ ಅಮಿತ್ ಶಾ ಆಗಮನ : ಅತೃಪ್ತರ ದೌಡು
ಸದ್ಯ ಪ್ರತಿಭಟನಾ ನಿರತರನ್ನು ಅಥಣಿ ಪೋಲಿಸರು ವಶಕ್ಕೆ ಪಡೆದು ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.