ಬೆಳಗಾವಿ: ಚಿಕ್ಕೋಡಿ ತಾಲೂಕಿನ ಸೊಲ್ಲಾಪುರ ಗ್ರಾಮದ ರೈತನ ಮಗ 625ಕ್ಕೆ 625 ಅಂಕ ಗಳಿಸುವ ಮೂಲಕ ಉತ್ತಮ ಸಾಧನೆ ಮಾಡಿದ್ದು, ಪೋಷಕರು, ಶಿಕ್ಷಕರು ಹರ್ಷ ವ್ಯಕ್ತಪಡಿಸಿದ್ದಾರೆ. ಸೊಲ್ಲಾಪುರ ಗ್ರಾಮದ ನಿವಾಸಿ ಆಗಿರುವ ಶಂಭು ಶಿವಾನಂದ ಖಾನೈ 625 ಅಂಕ ಪಡೆದು ಜಿಲ್ಲೆಗೆ ಮತ್ತು ಕಲಿತ ಶಾಲೆಗೆ ಕೀರ್ತಿ ತಂದಿದ್ದಾನೆ.
ಹಿಂದುಳಿದ ಕುಟುಂಬದಿಂದ ಬಂದಿರೋ ಶಂಭು ಅವರ ತಂದೆ ಕೃಷಿ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ. ತಾಯಿ ಮನೆಗೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ. ತೀವ್ರ ಬಡತನ ಇದ್ದರೂ ಶಂಭು ತರಗತಿಯಲ್ಲಿ ಮುಂದೆ ಇರುತ್ತಿದ್ದನು. ಇದರಿಂದಲೇ ಸಮಾಜ ಕಲ್ಯಾಣ ಇಲಾಖೆಯಿಂದ 6ನೇ ತರಗತಿಗೆ ನಡೆಸುವ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಚಿಕ್ಕೋಡಿ ಪಟ್ಟಣದಲ್ಲಿರುವ ಮೊರಾರ್ಜಿ ದೇಸಾಯಿ ರೆಸಿಡೆಂಟಲ್ ಶಾಲೆಯ ಶಿಕ್ಷಣಕ್ಕೆ ಆಯ್ಕೆ ಆಗಿದ್ದನು.
ಪ್ರತಿದಿನ ಐದು ಗಂಟೆಗಳ ಕಾಲ ವಿದ್ಯಾಭ್ಯಾಸ ಮಾಡಿ ಇದೀಗ ಚಿಕ್ಕೋಡಿ ಜಿಲ್ಲೆಗೆ ಪ್ರಥಮ ಬಂದಿದ್ದಲ್ಲದೇ ರಾಜ್ಯದಲ್ಲಿ ಪೂರ್ಣಾಂಕ ಪಡೆದ ವಿದ್ಯಾರ್ಥಿ ಲಿಸ್ಟ್ನಲ್ಲಿದ್ದು, ಇಡೀ ಜಿಲ್ಲೆಗೆ ಕೀರ್ತಿ ತಂದಿದ್ದಾನೆ. ಮುಂದೆ ಐಎಎಸ್ ಆಫೀಸರ್ ಆಗುವ ಕನಸು ಕಟ್ಟಿಕೊಂಡಿದ್ದಾನೆ.
ಕಿರಾಣಿ ಅಂಗಡಿ ಮಾಲೀಕನ ಪುತ್ರಿಯ ಸಾಧನೆ: ಬೆಳಗಾವಿ ಗ್ರಾಮೀಣ ಭಾಗದ ವಿದ್ಯಾರ್ಥಿನಿ ಅಪೂರ್ವ ಎಸ್ಎಸ್ಎಲ್ಸಿಯಲ್ಲಿ ಸಾಧನೆ ಮಾಡಿದ್ದಾಳೆ. ಸಹನಾ ಮಹಾಂತೇಶ ರಾಯರ್ ಪರೀಕ್ಷೆಯಲ್ಲಿ ಪೂರ್ಣಾಂಕ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. ಸಹನಾ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಸತ್ತಿಗೇರಿ ಗ್ರಾಮದವರು. ಸತ್ತಿಗೇರಿ ಗ್ರಾಮದ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ವಿದ್ಯಾರ್ಥಿನಿ ಸಹನಾ ವ್ಯಾಸಂಗ ಮಾಡಿದ್ದಾರೆ. ಇವರ ತಂದೆ ಮಹಾಂತೇಶ ಗ್ರಾಮದಲ್ಲಿ ಕಿರಾಣಿ ಅಂಗಡಿ ನಡೆಸಿ ಕುಟುಂಬ ಸಾಗಿಸುತ್ತಿದ್ದಾರೆ. ಮಧ್ಯಮ ಕುಟುಂಬದಿಂದ ಬಂದಿರುವ ಸಹನಾ ಸಾಧನೆಗೆ ಮೆಚ್ಚುಗೆ ವ್ಯಕ್ತವಾಗಿದೆ.
ಇದನ್ನೂ ಓದಿ : 28 ಮಂದಿ ಐಸಿಎಸ್ಗೆ ಮತಾಂತರ: ಈ ವಿಚಾರ ಗಮನಿಸಿದ್ದೇವೆ ಎಂದ ಗೃಹ ಸಚಿವರು