ಚಿಕ್ಕೋಡಿ: ಸಾಲಬಾಧೆ ತಾಳಲಾರದೆ ರೈತನೋರ್ವ ನೇಣಿಗೆ ಶರಣಾಗಿರುವ ಪ್ರಕರಣ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ನಡೆದಿದೆ.
![Farmer suicide](https://etvbharatimages.akamaized.net/etvbharat/prod-images/3744179_thumbjpg.jpg)
ಮಹಾದೇವ ಶಿವಪ್ಪ ಅಂಬಿ (48) ಆತ್ಮಹತ್ಯೆ ಮಾಡಿಕೊಂಡಿರುವ ರೈತ. ಈತ ಇಂಗಳಿ ಗ್ರಾಮದ ಸಹಕಾರಿ ಸಂಸ್ಥೆ ಹಾಗೂ ಇನ್ನಿತರ ಹಣಕಾಸು ಸಂಸ್ಥೆಗಳಲ್ಲಿ ಕೃಷಿಗೆ ಸಾಲ ಪಡೆದಿದ್ದ. ಇದಕ್ಕಾಗಿ ಮಾಡಿರುವ ಸಾಲ ತೀರಿಸಲಾಗದೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೃತನ ಪತ್ನಿ ತಿಳಿಸಿದ್ದಾರೆ.
ಈ ಸಂಬಂಧ ಅಂಕಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.