ETV Bharat / state

ಸಾಲಬಾಧೆ ತಾಳಲಾರದೆ ಅಥಣಿಯಲ್ಲಿ ರೈತ ಆತ್ಮಹತ್ಯೆ - latest suicide news

ಸಾಲಬಾಧೆ ತಾಳಲಾರದೆ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಥಣಿ ತಾಲೂಕಿನಲ್ಲಿ ನಡೆದಿದೆ.

farmer suicide in athani
ರೈತ ಆತ್ಮಹತ್ಯೆ
author img

By

Published : May 12, 2020, 6:55 PM IST

ಅಥಣಿ: ಸಾಲಬಾಧೆ ತಾಳಲಾರದೆ ಡಿಸಿಎಂ ಲಕ್ಷ್ಮಣ ಸವದಿ ಸ್ವ ಕ್ಷೇತ್ರದಲ್ಲಿ ರೈತನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ತಾಲೂಕಿನ ನಂದೇಶ್ವರ ಗ್ರಾಮದ ರೈತ ಸಂಗಪ್ಪ ಬಸಪ್ಪ ಯಲ್ಲಟ್ಟಿ (50) ಆತ್ಮಹತ್ಯೆ ಮಾಡಿಕೊಂಡ ರೈತ. ಈ ಹಿಂದೆ ಆಗಸ್ಟ್ ತಿಂಗಳಲ್ಲಿ ಪ್ರವಾಹ ಬಂದಾಗ 6 ಎಕರೆ ಜಮೀನಿನಲ್ಲಿ ಬೆಳೆದಿದ್ದ ಕಬ್ಬು ಹಾಗೂ ಮನೆ ಪ್ರವಾಹದಲ್ಲಿ ಮುಳುಗಿ ಸಂಪೂರ್ಣ ನಾಶವಾಗಿ ಅಪಾರ ಹಾನಿಯಾಗಿತ್ತು.

ಇವರು ಸಿಂಡಿಕೇಟ್ ಬ್ಯಾಂಕ್, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ, ಸ್ಥಳೀಯ ಸಹಕಾರಿ ಸಂಘದಲ್ಲಿ ಸಾಲ ಹಾಗೂ ಕೈಗಡ ಸೇರಿ 5 ಲಕ್ಷಕ್ಕೂ ಅಧಿಕ ಸಾಲ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ತಾವು ಮಾಡಿರುವ ಸಾಲ ತೀರಿಸಲು ಸಾಧ್ಯವಾಗದ ಹಿನ್ನೆಲೆ ಮನನೊಂದು ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಹಾಕಿಕೊಂಡಿದ್ದಾರೆ. ಮೃತ ರೈತನಿಗೆ ಇಬ್ಬರು ಗಂಡು ಮಕ್ಕಳು ಹಾಗೂ ಪತ್ನಿ ಇದ್ದರು. ಈ ಸಂಬಂಧ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.