ಅಥಣಿ : ಸತತ ಪೆಟ್ರೋಲ್-ಡೀಸೆಲ್ ದರ ಏರಿಕೆಯಾದ ಹಿನ್ನೆಲೆ ಜಮೀನುಗಳಲ್ಲಿ ರೈತರು ಟ್ರ್ಯಾಕ್ಟರ್ ಮುಖಾಂತರ ಕೆಲಸ ಮಾಡಬೇಕಾದರೆ ದುಬಾರಿ ಹಣ ಬಾಡಿಗೆ ರೂಪದಲ್ಲಿ ಕೊಡಬೇಕಾಗುತ್ತದೆ. ಇದರಿಂದ ರೈತರಿಗೆ ಕಷ್ಟವಾಗುತ್ತಿದೆ ಎಂದು ಅನ್ನದಾತರು ಅಳಲು ತೋಡಿಕೊಂಡಿದ್ದಾರೆ.
ಟ್ರ್ಯಾಕ್ಟರ್ ಬಾಡಿಗೆ ಕಳೆದ ವರ್ಷ ಒಂದು ತಾಸಿಗೆ ₹600 ನಿಗದಿ ಪಡಿಸಲಾಗಿತ್ತು. ಈ ಬಾರಿ 900 ರೂಪಾಯಿಗೆ ಹೆಚ್ಚಿಸಲಾಗಿದೆ. ಒಂದು ಕಡೆ ನೆರೆ, ಇನ್ನೊಂದು ಕಡೆ ಕೊರೊನಾದಿಂದ ರೈತನ ಸ್ಥಿತಿ ಚಿಂತಾಜನಕವಾಗಿದೆ.
ಕೇಂದ್ರ ಸರ್ಕಾರ ಪೆಟ್ರೋಲ್ ಡೀಸೆಲ್ ದರ ಕಡಿಮೆ ಮಾಡಿ ರೈತರ ನೆರವಿಗೆ ಬರಬೇಕೆಂಬುದು ಅನ್ನದಾತರ ಆಗ್ರಹವಾಗಿದೆ. ಪೆಟ್ರೋಲ್-ಡೀಸೆಲ್ ದರ ಏರಿಕೆಯಿಂದಾಗಿ ನಾವು ಜೀವನ ನಡೆಸುವುದು ತುಂಬಾ ಕಷ್ಟವಾಗಿದೆ ಎಂದು ಕೊಳವೆಬಾವಿ ಕೊರೆಯುವ ಕಾರ್ಮಿಕ ಅಳಲು ತೋಡಿಕೊಂಡಿದ್ದಾನೆ.