ETV Bharat / state

ಇಂದು ಸುವರ್ಣಸೌಧಕ್ಕೆ ಸಿಎಂ ಭೇಟಿ... ರೈತರ ಪ್ರತಿಭಟನೆ ನಂತರ ಎಚ್ಚೆತ್ತ ಪೊಲೀಸರು!

author img

By

Published : Jun 4, 2021, 9:31 AM IST

Updated : Jun 4, 2021, 10:14 AM IST

ಸುವರ್ಣಸೌಧಕ್ಕೆ ಸಿಎಂ ಭೇಟಿ ಹಿನ್ನೆಲೆ ರೈತರು ಪ್ರತಿಭಟನೆಗೆ ಮುಂದಾಗಿದ್ದ ಘಟನೆ ಬೆಳಗಾವಿಯ ಸುವರ್ಣಸೌಧದ ಮುಂದೆ ನಡೆಯಿತು.

Farmers protest, Farmers protest for CM Yediyurappa visit, Farmers protest for CM Yediyurappa visit to Belagavi,  Farmers protest,  Farmers protest news, ರೈತರು ಪ್ರತಿಭಟನೆ, ಸಿಎಂ ಯಡಿಯೂರಪ್ಪ ಭೇಟಿ ಹಿನ್ನೆಲೆ ರೈತರ ಪ್ರತಿಭಟನೆ, ಬೆಳಗಾವಿಗೆ ಸಿಎಂ ಯಡಿಯೂರಪ್ಪ ಭೇಟಿ ಹಿನ್ನೆಲೆ ರೈತರ ಪ್ರತಿಭಟನೆ, ರೈತರು ಪ್ರತಿಭಟನೆ, ಬೆಳಗಾವಿ ರೈತರು ಪ್ರತಿಭಟನೆ ಸುದ್ದಿ,
ಪ್ರತಿಭಟನೆಗೆ ಮುಂದಾಗಿದ್ದ ರೈತರನ್ನು ‌ವಶಕ್ಕೆ ಪಡೆದ ಪೊಲೀಸರು

ಬೆಳಗಾವಿ: ಸಿಎಂ ಭೇಟಿ ಹಿನ್ನೆಲೆ ಸುವರ್ಣಸೌಧದ‌ ಎದುರಿಗೆ ಪ್ರತಿಭಟನೆ ನಡೆಸಲು ಮುಂದಾಗಿದ್ದ ರೈತರನ್ನು ಪೊಲೀಸರು ವಶಕ್ಕೆ ಪಡೆದು ಹಿರೇಬಾಗೆವಾಡಿ ಠಾಣೆಗೆ ಕರೆದೊಯ್ದರು.

ಕೋವಿಡ್ ‌ನಿರ್ವಹಣೆ ಸೇರಿದಂತೆ ವಿವಿಧ ಇಲಾಖೆಗಳ‌ ಪ್ರಗತಿ ಪರಿಶೀಲನೆ ನಡೆಸಲು ಸಿಎಂ ಬಿ.ಎಸ್.ಯಡಿಯೂರಪ್ಪ ಇಂದು ಬೆಳಗ್ಗೆ 11 ಗಂಟೆಗೆ ಸುವರ್ಣಸೌಧದಲ್ಲಿ ಸಭೆ ನಡೆಸಲಿದ್ದಾರೆ. ಹೀಗಾಗಿ ಜಿಲ್ಲೆಯ ರೈತರು ಕಬ್ಬಿನ ಬಾಕಿ ಬಿಲ್ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸುವರ್ಣಸೌಧದ ಮುಂದೆ ಪ್ರತಿಭಟನೆಗೆ ಮುಂದಾಗಿದ್ದರು. ಈ ವೇಳೆ ಪ್ರತಿಭಟನೆ ಕೈಬಿಡುವಂತೆ ಮನವೊಲಿಸಲು ಮುಂದಾದ ಪೊಲೀಸರು ಹಾಗೂ ರೈತರ ಮಧ್ಯೆ ವಾಗ್ವಾದ ನಡೆಯಿತು. ಬಳಿಕ ಪೊಲೀಸರು ರೈತ ಮುಖಂಡರನ್ನ ವಶಕ್ಕೆ ಪಡೆದು ಹಿರೇಬಾಗೆವಾಡಿ ಪೊಲೀಸ್ ಠಾಣೆಗೆ ಒಯ್ದರು. ಈ ವೇಳೆ ರೈತರು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ರೈತ ಮುಖಂಡರು ಮಾತನಾಡಿ, ರಾಜ್ಯದಲ್ಲಿ ಅಂದಾಜು 1500 ಕೋಟಿ ಕಬ್ಬಿನ ಬಿಲ್ ಬಾಕಿಯಿದೆ. ತರಕಾರಿ ಬೆಳೆದ ರೈತರು ಸಂಕಷ್ಟದಲ್ಲಿದ್ದಾರೆ. ಹೀಗಾಗಿ ಸಿಎಂ ಭೇಟಿಯಾಗಿ ಪರಿಹಾರ ಕೇಳಲು ಬಂದಿದ್ದೇವೆ. ಅವರನ್ನು ಬಿಟ್ಟು ನಾವು ಯಾರನ್ನ ಕೇಳೋದು ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.

ಬಿಗಿ ಪೊಲೀಸ್ ಬಂದೋಬಸ್ತ್...

ಸುವರ್ಣಸೌಧಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೇಟಿ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಸುವರ್ಣಸೌಧದ ಸುತ್ತಲೂ ಪೊಲೀಸರು ಬಿಗಿ ಪೊಲೀಸ್ ಭದ್ರತೆ ಒದಗಿಸಿದ್ದಾರೆ. ಆದ್ರೆ ಭದ್ರತೆಗೆ ನಿಯೋಜನೆಗೊಂಡಿರುವ ಪೊಲೀಸರು ಮಾತ್ರ ಕೊರೊನಾ‌ ನಿಯಮ ಉಲ್ಲಂಘನೆ ಮಾಡಿದ್ದು, ಸಾಮಾಜಿಕ ‌ಅಂತರ ಮರೆತು‌ ಗುಂಪಾಗಿ ನಿಂತಿದ್ದಾರೆ.

ರೈತರ ಪ್ರತಿಭಟನೆ ನಂತರ ಎಚ್ಚೆತ್ತ ಪೊಲೀಸರು

ರೈತರ ಪ್ರತಿಭಟನೆ ಬಳಿಕ ಎಚ್ಚೆತ್ತುಕೊಂಡ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಸುವರ್ಣಸೌಧದ ಸುತ್ತಲೂ ತೀವ್ರ ನಿಗಾ ವಹಿಸಿದ್ದಾರೆ. ಓರ್ವ ಡಿಸಿಪಿ, ಇಬ್ಬರು ಎಸಿಪಿ, ನಾಲ್ವರು ಸಿಪಿಐ, 6ಕ್ಕೂ ಹೆಚ್ಚು ಪಿಎಸ್ಐಗಳು ಸೇರಿದಂತೆ 116ಕ್ಕೂ ಹೆಚ್ಚು ಪೊಲೀಸರು ಸುವರ್ಣಸೌಧದ ಎದುರಿಗೆ ಭದ್ರತೆಗಿದ್ದಾರೆ.

ಜಿಲ್ಲೆಯಲ್ಲಿ ಕೊರೊನಾ ಹೆಚ್ಚಳವಾಗುತ್ತಿದ್ದು, ಸೂಕ್ತ ‌ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಾದ ಪೊಲೀಸರು ಸಾಮಾಜಿಕ ಅಂತರ ಮರೆತು ಗುಂಪು ಗುಂಪಾಗಿ ನಿಲ್ಲುತ್ತಿದ್ದು, ಕೊರೊನಾ‌ ನಿಯಮ ಉಲ್ಲಂಘನೆ ಮಾಡುತ್ತಿದ್ದಾರೆ.

Last Updated : Jun 4, 2021, 10:14 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.