ETV Bharat / state

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭಾರತೀಯ ಕೃಷಿಕ ಸಮಾಜದಿಂದ ಪ್ರತಿಭಟನೆ

ರಾಜ್ಯಾದ್ಯಂತ ಮದ್ಯಪಾನವನ್ನು ಸಂಪೂರ್ಣವಾಗಿ ನಿಷೇಧಿಸಬೇಕು. ಅಷ್ಟೇ ಅಲ್ಲದೆ ಕೇಂದ್ರ ಸರ್ಕಾರ ಜಾರಿಗೆ ತರುತ್ತಿರುವ ಸಮಗ್ರ ಆರ್ಥಿಕ ಸಹಭಾಗಿತ್ವ ಒಪ್ಪಂದವನ್ನು ಕೈಬಿಡಬೇಕೆಂದು ಒತ್ತಾಯಿಸಿ ಬೆಳಗಾವಿಯಲ್ಲಿ ಭಾರತೀಯ ಕೃಷಿಕ ಸಮಾಜದ ವತಿಯಿಂದ ಪ್ರತಿಭಟನೆ ನಡೆಸಲಾಗಿದೆ.

ಭಾರತಿಯ ಕೃಷಿಕ ಸಮಾಜದಿಂದ ಪ್ರತಿಭಟನೆ
author img

By

Published : Oct 22, 2019, 5:23 PM IST

ಬೆಳಗಾವಿ: ರಾಜ್ಯಾದ್ಯಂತ ಮದ್ಯಪಾನವನ್ನು ಸಂಪೂರ್ಣವಾಗಿ ನಿಷೇಧಿಸಬೇಕು. ಅಷ್ಟೇ ಅಲ್ಲದೆ ಕೇಂದ್ರ ಸರ್ಕಾರ ಜಾರಿಗೆ ತರುತ್ತಿರುವ ಸಮಗ್ರ ಆರ್ಥಿಕ ಸಹಭಾಗಿತ್ವ ಒಪ್ಪಂದವನ್ನು ಕೈಬಿಡಬೇಕೆಂದು ಒತ್ತಾಯಿಸಿ ನಗರದಲ್ಲಿ ಭಾರತೀಯ ಕೃಷಿಕ ಸಮಾಜದ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಭಾರತೀಯ ಕೃಷಿಕ ಸಮಾಜದಿಂದ ಪ್ರತಿಭಟನೆ

ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಭಾರತಿಯ ಕೃಷಿಕ ಸಮಾಜದ ಕಾರ್ಯಕರ್ತರನ್ನು ಕಚೇರಿ ಒಳ ಆವರಣಕ್ಕೆ ಪ್ರವೇಶಿಸದಂತೆ ಪೊಲೀಸರು ತಡೆದಿದ್ದರು. ಈ ವೇಳೆ ಮಾತಿನ ಚಕಮಕಿಯು ನಡೆಯಿತು. ಶಾಂತ ರೀತಿಯಿಂದ ಮನವಿ ಕೊಡಲು ಬಂದಿದ್ದೇವೆ. ಘೋಷಣೆಗಳನ್ನೂ ಕೂಗಿಲ್ಲ. ಆದರೂ ನಮ್ಮನ್ನು ಹೊರಗೆ ನಿಲ್ಲಿಸುತ್ತಿದ್ದೀರಿ. ಇದನ್ನು ನೋಡಿದರೆ ಜಿಲ್ಲಾಡಳಿತ ರೈತರನ್ನು ಕಡೆಗಣಿಸುತ್ತಿದೆ ಎಂದು ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ರೈತರನ್ನು ಜಿಲ್ಲಾಧಿಕಾರಿಗಳ ಕಚೇರಿ ಆವರಣಕ್ಕೆ ಬಿಡಲಾಯಿತು.

ರೈತರು ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸುವುದರ ಮೂಲಕ ರಾಜ್ಯದಲ್ಲಿ ಮದ್ಯಪಾನವನ್ನು ಸಂಪೂರ್ಣವಾಗಿ ನಿಷೇಧಗೊಳಿಸಬೇಕು. ಅಷ್ಟೇ ಅಲ್ಲದೆ, ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ ಮುಕ್ತ ವ್ಯಾಪಾರ ಒಪ್ಪಂದವನ್ನು ಜಾರಿಗೆ ತರದಂತೆ ಕೇಂದ್ರದ ಮೇಲೆ ಒತ್ತಡ ತರಬೇಕು. ಮುಂಬೈ ಕರ್ನಾಟಕವನ್ನು ಕಿತ್ತೂರು ಕರ್ನಾಟಕವೆಂದು ಮರುನಾಮಕರಣ ಮಾಡಬೇಕೆಂದು ಒತ್ತಾಯಿಸಿದರು.

Intro:ಮದ್ಯಪಾನ ನಿಷೇದಿಸುವಂತೆ ಒತ್ತಾಯಿಸಿ ಬೆಳಗಾವಿಯಲ್ಲಿ ಪ್ರತಿಭಟನೆ

ಬೆಳಗಾವಿ : ರಾಜ್ಯಾದ್ಯಂತ ಮದ್ಯಪಾನವನ್ನು ಸಂಪೂರ್ಣವಾಗಿ ನಿಷೇದಿಸಬೇಕು ಮತ್ತು ಕೇಂದ್ರ ಸರ್ಕಾರ ಜಾರಿಗೆ ತರುತ್ತಿರುವ ಸಮಗ್ರ ಆರ್ಥಿಕ ಸಹಭಾಗಿತ್ವ ಒಪ್ಪಂದ ಕೈ ಬಿಡಬೇಕೆಂದು ಒತ್ತಾಯಿಸಿ. ಭಾರತೀಯ ಕೃಷಿಕ ಸಮಾಜದ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

Body:ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ. ಭಾರತಿಯ ಕೃಷಿಕ ಸಮಾಜದ ಕಾರ್ಯಕರ್ತರನ್ನು ಕಚೇರಿ ಒಳ ಆವರಣಕ್ಕೆ ಪ್ರವೇಶಿಸದಂತೆ ಪೊಲೀಸರು ತಡೆದಿದ್ದಕ್ಕೆ ಮಾತಿನ ಚಕಮಕಿಯು ಎರ್ಪಟ್ಟಿತು. ಶಾಂತ ರೀತಿಯಿಂದ ಮನವಿ ಕೊಡಲು ಬಂದಿದ್ದೇವೆ ಘೋಷಣೆಗಳನ್ನೂ ಕೂಗಿಲ್ಲ ಆದರೂ ನಮ್ಮನ್ನು ಹೊರಗೆ ನಿಲ್ಲಿಸುತ್ತಿದ್ದಿರಿ ಇದನ್ನು ನೋಡಿದರೆ ಜಿಲ್ಲಾಡಳಿತ ರೈತರನ್ನು ಕಡೆಗಣಿಸುತ್ತಿದೆ ಎಂದು ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು. ನಂತರ ರೈತರನ್ನು ಜಿಲ್ಲಾಧಿಕಾರಿಗಳ ಕಚೇರಿ ಆವರಣಕ್ಕೆ ಬಿಡಲಾಯಿತು.

ಬಳಿಕ ರೈತರು ಜಿಲ್ಲಾಧಿಕಾರಿಗಳ ಮಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸುವುದರ ಮೂಲಕ. ರಾಜ್ಯದಲ್ಲಿ ಮದ್ಯಪಾನವನ್ನು ಸಂಪೂರ್ಣವಾಗಿ ನಿಷೇಧಗೊಳಿಸಬೇಕು ಮತ್ತು ಕೇಂದ್ರ ಸರಕಾರ ಜಾರಿಗೆ ತರಲು ಹೊರಟಿರುವ ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ ಮುಕ್ತ ವ್ಯಾಪಾರ ಒಪ್ಪಂದವನ್ನು ಜಾರಿಗೆ ತರದಂತೆ ಕೇಂದ್ರದ ಮೇಲೆ ಒತ್ತಡ ತರಬೇಕು. ಮುಂಬೈ ಕರ್ನಾಟಕವನ್ನು ಕಿತ್ತೂರು ಕರ್ನಾಟಕವೆಂದು ನಾಮಕರಣ ಮಾಡಬೇಕೆಂದು ಒತ್ತಾಯಿಸಿದರು.

Conclusion:ಈ ಸಂದರ್ಭದಲ್ಲಿ ಸಂಘಟನೆಯ ರಾಜ್ಯಾಧ್ಯಕ್ಷ ಸಿದಗೌಡ ಮೋದಗಿ ಮಾತನಾಡಿ. ಮದ್ಯಪಾನದಿಂದ ಹಲವಾರು ಕುಟುಂಬಗಳು ಬೀದಿಗೆ ಬರುತ್ತಿರುವುದರಿಂದ ಕೂಡಲೇ ಸರ್ಕಾರ ಮದ್ಯಪಾನವನ್ನು ಸಂಪೂರ್ಣವಾಗಿ ತಡೆಗಟ್ಟಬೇಕು. ಕೇಂದ್ರದ ಯೋಜನೆಯಾದ ಆರ್.ಸಿಇಪಿಯಿಂದ ರೈತರು ಸಂಕಷ್ಟಕ್ಕೆ ಸಿಲುಕುವ ಸಾದ್ಯತೆ ಇದ್ದು ಅದನ್ನು ಕೈಬಿಡಬೇಕೆಂದು ಆಗ್ರಹಿಸಿದರು.

ವಿನಾಯಕ ಮಠಪತಿ
ಬೆಳಗಾವಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.