ETV Bharat / state

ಬೆಳಗಾವಿ: ಕಬ್ಬಿನ ಬಾಕಿ ಬಿಲ್ ಪಾವತಿಗೆ ಆಗ್ರಹಿಸಿ ರೈತರ ಪ್ರತಿಭಟನೆ... - ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ

ಮಲಪ್ರಭಾ ಕಾರ್ಖಾನೆ ಜಿಲ್ಲೆಯ ಕಬ್ಬು ಬೆಳೆಗಾರರ ಮೂವತ್ತು ಕೋಟಿಗೂ ಅಧಿಕ ಬಾಕಿ ಹಣ ಉಳಿಸಿಕೊಂಡಿದೆ. ಹೀಗಾಗಿ ಸಕ್ಕರೆ ಕಾರ್ಖಾನೆ ಕಚೇರಿ ಬಂದ್ ಮಾಡಿ ಇಂದಿನಿಂದ ಕಾರ್ಖಾನೆ ಎದುರು ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲು ಕಬ್ಬು ಬೆಳೆಗಾರರು ನಿರ್ಧರಿಸಿದ್ದಾರೆ.

Farmers protest
ರೈತರ ಪ್ರತಿಭಟನೆ
author img

By

Published : Sep 7, 2020, 8:16 PM IST

ಬೆಳಗಾವಿ: ಎರಡು ವರ್ಷಗಳ ಕಬ್ಬಿನ ಬಾಕಿ ಬಿಲ್ ಪಾವತಿಸುವಂತೆ ಆಗ್ರಹಿಸಿ ಮಲಪ್ರಭಾ ಸಕ್ಕರೆ ಕಾರ್ಖಾನೆ ಎದುರು ರೈತರು ಪ್ರತಿಭಟನೆ ನಡೆಸಿದರು.

ಜಿಲ್ಲೆಯ ಎಂ.ಕೆ‌. ಹುಬ್ಬಳ್ಳಿ ಬಳಿ ಇರುವ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಎದುರು ಜಮಾಯಿಸಿದ ಕಬ್ಬು ಬೆಳೆಗಾರರು ಬಾಕಿ ಬಿಲ್ ಪಾವತಿಸುವಂತೆ ಆಗ್ರಹಿಸಿದರು.

ಕಬ್ಬಿನ ಬಾಕಿ ಬಿಲ್ ಪಾವತಿಗೆ ಆಗ್ರಹಿಸಿ ರೈತರ ಪ್ರತಿಭಟನೆ

ಕಳೆದ ವರ್ಷದ ಪ್ರವಾಹದಲ್ಲಿ ಬೆಳೆ ಕಳೆದುಕೊಂಡಿದ್ದ ರೈತರು ಅಲ್ಪ ಪ್ರಮಾಣದ ಕಬ್ಬನ್ನು ಕಾರ್ಖಾನೆಗೆ ಸಾಗಿಸಿದ್ದರು. ಆದರೆ ಕಳೆದ ವರ್ಷ ಮತ್ತು ಪ್ರಸಕ್ತ ಸಾಲಿನ ಬಾಕಿ ಹಣವನ್ನು ಕಾರ್ಖಾನೆ ಪಾವತಿ ಮಾಡುತ್ತಿಲ್ಲ ಎಂದು ರೈತರು ಆರೋಪಿಸಿದರು.

ಮಲಪ್ರಭಾ ಕಾರ್ಖಾನೆ ಜಿಲ್ಲೆಯ ಕಬ್ಬು ಬೆಳೆಗಾರರ ಮೂವತ್ತು ಕೋಟಿಗೂ ಅಧಿಕ ಬಾಕಿ ಹಣ ಉಳಿಸಿಕೊಂಡಿದೆ. ಹೀಗಾಗಿ ಸಕ್ಕರೆ ಕಾರ್ಖಾನೆ ಕಚೇರಿ ಬಂದ್ ಮಾಡಿ ಇಂದಿನಿಂದ ಕಾರ್ಖಾನೆ ಎದುರು ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲು ಕಬ್ಬು ಬೆಳೆಗಾರರು ನಿರ್ಧರಿಸಿದ್ದಾರೆ. ಧರಣಿ ಸತ್ಯಾಗ್ರಹಕ್ಕೆ ವಿವಿಧ ಮಠದ ಮಠಾಧೀಶರು ಸಾಥ್ ನೀಡಿದ್ದಾರೆ. ಬಾಕಿ ಹಣ ಪಾವತಿಸುವವರೆಗೂ ರೈತರು ಪ್ರತಿಭಟನೆ ನಡೆಸಲಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.