ಬೆಳಗಾವಿ: ಬೈಲಹೊಂಗಲ, ಕಿತ್ತೂರು ತಾಲೂಕು ಸೇರಿ ಜಿಲ್ಲೆಯ ಹಲವೆಡೆ ಕಳಪೆ ಸೋಯಾಬೀನ್ ಬಿತ್ತನೆ ಬೀಜ ವಿತರಿಸಿದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ, ನಗರದ ಜಂಟಿ ಕೃಷಿ ಇಲಾಖೆ ಆವರಣದಲ್ಲಿ ಅಖಂಡ ಕರ್ನಾಟಕ ರಾಜ್ಯ ರೈತ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.
ಕಳಪೆ ಸೋಯಾಬೀನ್ ಬಿತ್ತನೆ ಬೀಜ ವಿತರಿಸಿದ ಸಹಕಾರಿ ಸಂಘ, ಬೀಜ ಪರೀಕ್ಷೆ ಮಾಡಿ ಪ್ರಮಾಣ ಪತ್ರ ನೀಡಿದ ವಿಜ್ಞಾನಿ, ಅಧಿಕಾರಿಗಳ ಮೇಲೆ ರಾಜ್ಯ ಸರ್ಕಾರ ಈ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ರೈತರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ರೈತರ ಬೆಳೆ ನಷ್ಟಕ್ಕೆ ಪರಿಹಾರ ನೀಡಬೇಕು, ರೈತರು ಲಕ್ಷಾಂತರ ರೂ. ಖರ್ಚು ಮಾಡಿ ಬಿತ್ತನೆ ಮಾಡಿದ ಸೋಯಾಬೀನ್ ಬೀಜಗಳು ಭೂಮಿಯಲ್ಲಿ ಮೊಳೆಕೆಯೊಡೆಯುತ್ತಿಲ್ಲ. ಈಗಾಗಲೇ ರೈತರು ಕೊರೊನಾ ಸಂಕಷ್ಟಕ್ಕೂ ಒಳಗಾಗಿದ್ದಾರೆ. ಹೀಗಾಗಿ ಸರ್ಕಾರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕೃಷಿ ಅಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿದರು.