ಅಥಣಿ: ಎಪಿಎಂಸಿಯಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರ ಪ್ರಾರಂಭ ಮಾಡುವಂತೆ ಸರ್ಕಾರಕ್ಕೆ ಒತ್ತಾಯಿಸಿ ಸಂಕೇಶ್ವರ-ವಿಜಯಪುರ ರಾಜ್ಯ ಹೆದ್ದಾರಿ ರಸ್ತೆ ತಡೆದು, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಪ್ರತಿಭಟನೆ ನಡೆಸಲಾಗಿದೆ.
ರೈತ ಮುಖಂಡ ಮಹಾದೇವ ಮಡಿವಾಳ ಮಾತನಾಡಿ, ತಾಲೂಕಿನಲ್ಲಿ ನೂರಾರು ಹೆಕ್ಟೇರ್ ಪ್ರದೇಶದಲ್ಲಿ ಬೆಳೆದ ಮೆಕ್ಕೆಜೋಳಕ್ಕೆ ಸೂಕ್ತ ಬೆಲೆಯಿಲ್ಲದೆ ರೈತರು ಪರದಾಡುವಂತಾಗಿದ್ದು, ಈ ಮಧ್ಯೆ ಕೆಲವು ದಲ್ಲಾಳಿಗಳು ಗೋವಿನ ಜೋಳವನ್ನು ಅತಿ ಕಡಿಮೆ ದರಕ್ಕೆ ಕೊಂಡುಕೊಳ್ಳುವುದುರಿಂದ ರೈತರಿಗೆ ನಷ್ಟ ಸಂಭವಿಸುತ್ತದೆ. ಆದ್ದರಿಂದ ಆದಷ್ಟು ಬೇಗ ಎಪಿಎಂಸಿಗಳಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರಗಳನ್ನು ಸರ್ಕಾರ ಪ್ರಾರಂಭ ಮಾಡಬೇಕೆಂದು ಒತ್ತಾಯಿಸಿದರು.
ಇದೇ ಸಂದರ್ಭದಲ್ಲಿ ಪ್ರತಿಭಟನಾ ಸ್ಥಳಕ್ಕೆ ಬಂದ ಅಥಣಿ ತಹಶೀಲ್ದಾರ್ ದುಂಡಪ್ಪ ಕೋಮಾರ್ ರೈತರ ಮನವಿ ಆಲಿಸಿ ಆದಷ್ಟು ಬೇಗನೆ ಮೆಕ್ಕೆಜೋಳ ಖರೀದಿ ಕೇಂದ್ರ ಪ್ರಾರಂಭ ಮಾಡುವಂತೆ ಸರ್ಕಾರಕ್ಕೆ ಶಿಫಾರಸ್ಸು ಮಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ.