ಬೆಳಗಾವಿ: ಸಕ್ಕರೆ ನಿರ್ದೇಶನಾಲಯ ವಿಲೀನಕ್ಕೆ ಸರ್ಕಾರದ ಯತ್ನ ಹಿನ್ನೆಲೆ ಸಚಿವ ಶಿವರಾಮ ಹೆಬ್ಬಾರ್ಗೆ ರೈತರು ತೀವ್ರ ವಿರೋಧ ವ್ಯಕ್ತಪಡಿಸಿ ಅವರ ವಾಹನಕ್ಕೆ ಮುತ್ತಿಗೆ ಹಾಕಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ನಗರದ ಡಿಸಿ ಕಚೇರಿ ಆವರಣದ ಎದುರಿಗೆ ಆಗಮಿಸುತ್ತಿದಂತೆ ಸಚಿವ ಶಿವರಾಮ ಹೆಬ್ಬಾರ್ ಅವರಿಗೆ ಮುತ್ತಿಗೆ ಹಾಕಿದ ರೈತ ಮುಖಂಡರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಕಾರಿನಿಂದ ಕೆಳಗಿಳಿದ ಸಚಿವ ಶಿವರಾಮ ಹೆಬ್ಬಾರ್ ರೈತರ ಸಮಸ್ಯೆಗಳನ್ನು ಆಲಿಸಿದರು. ಈ ಬಗ್ಗೆ ಪರಿಶೀಲನೆ ನಡೆಸುವುದಾಗಿ ಭರವಸೆ ನೀಡಿದರು.
ಆದ್ರೆ, ಸಚಿವರ ಅಸಮರ್ಪಕ ಉತ್ತರಕ್ಕೆ ಅಸಮಾಧಾನ ವ್ಯಕ್ತಪಡಿಸಿ ರೈತ ಮುಖಂಡರು ಸಚಿವರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.