ETV Bharat / state

ಮಾವಿನಕಟ್ಟಿ ಗ್ರಾಮಕ್ಕೆ ರಸ್ತೆ ಸಂಪರ್ಕ ಒದಗಿಸುವಂತೆ ಆಗ್ರಹಿಸಿ ಪ್ರತಿಭಟನೆ

ಬೆಳಗಾವಿ ತಾಲೂಕಿನ ಮಾವಿನಕಟ್ಟಿ ಗ್ರಾಮದಿಂದ ಗಣಿಕೊಪ್ಪ ಗ್ರಾಮಕ್ಕೆ ರಸ್ತೆ ಸಂಪರ್ಕ ಒದಗಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.

Protest in Belgavi
ಮಾವಿನಕಟ್ಟಿ ಗ್ರಾಮಕ್ಕೆ ರಸ್ತೆ ಸಂಪರ್ಕ ಒದಗಿಸುವಂತೆ ಆಗ್ರಹಿಸಿ ಪ್ರತಿಭಟನೆ
author img

By

Published : Aug 20, 2020, 3:53 PM IST

ಬೆಳಗಾವಿ: ತಾಲೂಕಿನ ಮಾವಿನಕಟ್ಟಿ ಗ್ರಾಮದಿಂದ ಗಣಿಕೊಪ್ಪ ಗ್ರಾಮಕ್ಕೆ ರಸ್ತೆ ಸಂಪರ್ಕ ನಿರ್ಮಾಣಕ್ಕೆ ಒತ್ತಾಯಿಸಿ ನಗರದ ಡಿಸಿ ಕಚೇರಿ ಎದುರು ಕರ್ನಾಟಕ ರಾಜ್ಯ ರೈತ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.

ಮಾವಿನಕಟ್ಟಿ ಗ್ರಾಮಕ್ಕೆ ರಸ್ತೆ ಸಂಪರ್ಕ ಒದಗಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘದಿಂದ ಆಗ್ರಹ

ಈ ವೇಳೆ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ ರೈತ ಸಂಘದ ಪದಾಧಿಕಾರಿಗಳು, ಮಾವಿನಕಟ್ಟಿ ಗ್ರಾಮದಿಂದ ಗಣಿಕೊಪ್ಪ ಹಾಗೂ ಬೆಳಗಾವಿಗೆ ಸಂಪರ್ಕ ಕಲ್ಪಿಸುತ್ತಿದ್ದ ದಾರಿಯನ್ನು ಬಂದ್ ಮಾಡಲಾಗಿದೆ. ಇದರಿಂದ ಸಾಕಷ್ಟು ರೈತರು ತೊಂದರೆಗೀಡಾಗಿದ್ದಾರೆ. ಹಾಗಾಗಿ ಜಿಲ್ಲಾಡಳಿತ ಆದಷ್ಟು ಬೇಗ ರಸ್ತೆ ನಿರ್ಮಿಸಬೇಕು. ಜೊತೆಗೆ ಈಗ ಬಂದ್ ಮಾಡಿರುವ ರಸ್ತೆಯಲ್ಲಿ ರೈತರಿಗೆ ಸಂಚರಿಸಲು ಅನುವು ಮಾಡಿಕೊಡಬೇಕು ಎಂದು ಆಗ್ರಹಿಸಿದರು.

Protest in Belgavi
ಮಾವಿನಕಟ್ಟಿ ಗ್ರಾಮಕ್ಕೆ ರಸ್ತೆ ಸಂಪರ್ಕ ಒದಗಿಸುವಂತೆ ಮನವಿ

ಇನ್ನು ಮಾವಿನಕಟ್ಟಿ ಗ್ರಾಮದಲ್ಲಿ ರೈತರ ಹೊಲಗಳಿಗೆ ತೆರಳಲು ಸರಿಯಾದ ರಸ್ತೆ ಇಲ್ಲ. ಗ್ರಾಮದ ಸರಹದ್ದಿನಲ್ಲೇ ಇದ್ದ ಚಕ್ಕಡಿ ಗಾಡಿ ರಸ್ತೆಯನ್ನು ಸಹ ಬಂದ್ ಮಾಡಲಾಗಿದೆ. ಇದರಿಂದ ಗ್ರಾಮಸ್ಥರಿಗೆ ಭಾರಿ ತೊಂದರೆಯಾಗಿದೆ. ರಾಜ್ಯ ಸರ್ಕಾರ ಈ ಕೂಡಲೇ ಮಾವಿನಕಟ್ಟಿ ಗ್ರಾಮಕ್ಕೆ ಕನಿಷ್ಠ 8 ಅಡಿ ಅಗಲದ ರಸ್ತೆ ನಿರ್ಮಿಸಿಕೊಡಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.