ಬೆಳಗಾವಿ: ಖಾಸಗಿ ಶಾಲೆಯೊಂದರ ಸಹ ಶಿಕ್ಷಕ ತನ್ನ ಸಹೋದ್ಯೋಗಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಗೋಕಾಕ್ ತಾಲೂಕಿನ ಕಡಬಗಟ್ಟಿ ಗುಡ್ಡದಲ್ಲಿ ನಡೆದಿದೆ.
ಅರಬಾಂವಿಯ ಖಾಸಗಿ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕ ಲಕ್ಕಪ್ಪ ಬೆನ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಅದೇ ಶಾಲೆಯ ಸಹ ಶಿಕ್ಷಕ ಬೀರಪ್ಪ ಕಂಡ್ರಟ್ಟಿ ಎಂಬುವರ ವಿರುದ್ಧ ಹಲ್ಲೆ ಆರೋಪ ಕೇಳಿ ಬಂದಿದೆ. ಹಳೇ ವೈಷಮ್ಯ ಹಿನ್ನೆಲೆಯಲ್ಲಿ ಶಿಕ್ಷಕ ಲಕ್ಕಪ್ಪನ ಮೇಲೆ ಬೀರಪ್ಪ ಹಲ್ಲೆಗೈದು ಪರಾರಿಯಾಗಿದ್ದಾರೆ ಎಂದು ಹೇಳಲಾಗ್ತಿದೆ.
ಗಂಭೀರವಾಗಿ ಗಾಯಗೊಂಡಿರುವ ಲಕ್ಕಪ್ಪ ಬೆನ್ನಿಯನ್ನು ಗೋಕಾಕ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗೋಕಾಕ್ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.