ಬೆಳಗಾವಿ : ಕರ್ತವ್ಯದಲ್ಲಿದ್ದಾಗಲೇ ಇಲ್ಲಿನ ಜಿಲ್ಲಾಸ್ಪತ್ರೆಯ ಮಹಿಳಾ ಸೆಕ್ಯೂರಿಟಿ ಗಾರ್ಡ್ ಒಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈಯ್ದಿರುವ ಘಟನೆ ತಡರಾತ್ರಿ ನಡೆದಿದೆ.
ಬೆಳಗಾವಿ ನಿವಾಸಿ ಸುಧಾ ಹಡಪದ(30) ಹತ್ಯೆಯಾಗಿರುವ ಮಹಿಳಾ ಸೆಕ್ಯೂರಿಟಿ ಗಾರ್ಡ್. ಜಿಲ್ಲಾಸ್ಪತ್ರೆಯ ಹೆರಿಗೆ ವಾರ್ಡ್‌ನಲ್ಲಿ ಸುಧಾ ಹಡಪದ ಕೆಲಸ ಮಾಡುತ್ತಿದ್ದರು. ಇವರನ್ನು ಜಿಲ್ಲಾಸ್ಪತ್ರೆಯ ಆವರಣದಲ್ಲೇ ತಲವಾರ್‌ನಿಂದ ಕೊಚ್ಚಿ ದುಷ್ಕರ್ಮಿಗಳು ಕೊಲೆಗೈದಿದ್ದಾರೆ.
ಘಟನೆಗೆ ನಿಖರ ಕಾರಣ ತಿಳಿದಿಲ್ಲ. ವಿಷಯ ತಿಳಿದು ಸ್ಥಳಕ್ಕೆ ಎಪಿಎಂಸಿ ಠಾಣೆ ಪೊಲೀಸರು ಆಗಮಿಸಿದ್ದು, ಶಂಕಿತ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ಈ ಘಟನೆ ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.