ಚಿಕ್ಕೋಡಿ: ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಬಿಜೆಪಿ ಟಿಕೆಟ್ ಘೋಷಣೆ ಆಗಿದೆ. ಕೊನೆ ಕ್ಷಣದಲ್ಲಿ ಉದ್ಯಮಿ ಅಣ್ಣಾಸಾಹೇಬ್ ಜೊಲ್ಲೆಗೆ ಬಿಜೆಪಿ ಟಿಕೆಟ್ ನೀಡಿದೆ. ಇದರಿಂದ ಕತ್ತಿ ಸಹೋದರರಿಗೆ ತೀವ್ರ ಮುಖಭಂಗವಾಗಿದೆ. ಹೀಗಾಗಿ ಚಿಕ್ಕೋಡಿ ಕ್ಷೇತ್ರ ಬಂಡಾಯದ ಬಲೆಗೆ ಸಿಲುಕುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.
ಟಿಕೆಟ್ ಕೈ ತಪ್ಪಿದ್ದರಿಂದ ಕತ್ತಿ ಸಹೋದರರು ಮುಂದಿನ ನಡೆ ಬಗ್ಗೆ ಇನ್ನೂ ನಿರ್ಧಾರ ಕೈಗೊಂಡಿಲ್ಲ. ಒಟ್ಟಿನಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಯಾರೆಂಬ ಪ್ರಶ್ನೆಗೆ ಉತ್ತರ ದೊರೆತಂತಾಗಿದೆ.