ETV Bharat / state

ಬೆಳಗಾವಿಯ ಕೊರೊನಾ ಹಾಟ್​​ಸ್ಪಾಟ್ ಹಿರೇಬಾಗೇವಾಡಿಗೆ ಕೊನೆಗೂ ಭೇಟಿ ನೀಡಿದ ಡಿಸಿ!

ಹಿರೇಬಾಗೇವಾಡಿ ಗ್ರಾಮಕ್ಕೆ ಒಮ್ಮೆಯೂ ಜಿಲ್ಲಾಧಿಕಾರಿ ಭೇಟಿ ‌ನೀಡಿಲ್ಲ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ನಿನ್ನೆಯಷ್ಟೇ ಮಾಧ್ಯಮಗಳ ಎದುರು ಅಸಮಾಧಾನ ‌ವ್ಯಕ್ತಪಡಿಸಿದ್ದರು.

finally dc visited the corona hotspot in belagavi districts
ಬೆಳಗಾವಿ ಕೊರೊನಾ ಹಾಟ್ ಸ್ಪಾಟ್ ಹಿರೇಬಾಗೇವಾಡಿಗೆ ಕೊನೆಗೂ ಭೇಟಿ ನೀಡಿದ ಡಿಸಿ
author img

By

Published : May 1, 2020, 5:23 PM IST

ಬೆಳಗಾವಿ: ಜಿಲ್ಲೆಯಲ್ಲಿ ಹೆಚ್ಚಿನ ಕೊರೊನಾ ಸೋಂಕಿತರಿರುವ ತಾಲೂಕಿನ ಹಿರೇಬಾಗೇವಾಡಿ ಗ್ರಾಮಕ್ಕೆ ಡಿಸಿ ಡಾ. ಎಸ್.ಬಿ.ಬೊಮ್ಮನಹಳ್ಳಿ ಮೊದಲ ಸಲ ಭೇಟಿ ನೀಡಿ ಜನರ ಅಹವಾಲು ಆಲಿಸಿದರು.

ಹಿರೇಬಾಗೇವಾಡಿ ಗ್ರಾಮಕ್ಕೆ ಒಮ್ಮೆಯೂ ಜಿಲ್ಲಾಧಿಕಾರಿ ಭೇಟಿ ‌ನೀಡಿಲ್ಲ ಎಂದು ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ನಿನ್ನೆಯಷ್ಟೇ ಮಾಧ್ಯಮಗಳ ಎದುರು ಅಸಮಾಧಾನ ‌ವ್ಯಕ್ತಪಡಿಸಿದ್ದರು. ಅಲ್ಲದೇ ಇಲ್ಲಿನ ಜನರಿಗೆ ಅಗತ್ಯ ವಸ್ತುಗಳ ‌ಪೂರೈಕೆ ಆಗುತ್ತಿಲ್ಲವೆಂದು ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೂ ಪತ್ರ ಬರೆದಿದ್ದರು.

ಇದರಿಂದ ಎಚ್ಚೆತ್ತ ಜಿಲ್ಲಾಧಿಕಾರಿ ಇಂದು ಹಿರೇಬಾಗೇವಾಡಿ ಪೊಲೀಸ್ ಠಾಣೆ ಆವರಣದಲ್ಲಿ ಕೋವಿಡ್-19 ತಡೆಗಟ್ಟುವಿಕೆ ಹಾಗೂ ಜನರಿಗೆ ಅಗತ್ಯ ವಸ್ತುಗಳ ಪೂರೈಕೆಗೆ ಸಂಬಂಧಿಸಿದಂತೆ ಸಭೆ ನಡೆಸಿದರು. ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ‌ಡಾ. ಎಸ್.ಬಿ.ಬೊಮ್ಮನಹಳ್ಳಿ, ಹಿರೇಬಾಗೇವಾಡಿ ಗ್ರಾಮಸ್ಥರು ಕೋವಿಡ್-19 ಬಗ್ಗೆ ಯಾವುದೇ ರೀತಿಯ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಇಲ್ಲಿನ ಜನರ ಸಮಸ್ಯೆಗಳನ್ನು ಜಿಲ್ಲಾಡಳಿತ ಗಮನಿಸಿದ್ದು, ವೈದ್ಯಕೀಯ ಸೌಲಭ್ಯ, ಅಗತ್ಯ ವಸ್ತುಗಳ ಪೂರೈಕೆ, ಜಾನುವಾರುಗಳಿಗೆ ಮೇವು ಸೇರಿದಂತೆ ಎಲ್ಲಾ ಬಗೆಯ ಸೌಲಭ್ಯಗಳನ್ನು ಕಲ್ಪಿಸಲಾಗುವುದು.

ಸೋಂಕು ಸಂಪೂರ್ಣವಾಗಿ ತಡೆಗಟ್ಟಲು ಸರ್ಕಾರ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಎಲ್ಲರೂ ಸಹಕರಿಸಿದರೆ ಸೋಂಕು ಹರಡುವಿಕೆಯನ್ನು ತಡೆಗಟ್ಟುವುದು ಸಾಧ್ಯವಾಗಲಿದೆ. ಕಂಟೈನ್ಮೆಂಟ್ ಝೋನ್​ನಲ್ಲಿ ಟ್ರ್ಯಾಕ್ಟರ್ ಮೂಲಕ ಪಡಿತರ ಆಹಾರ ಧಾನ್ಯಗಳನ್ನು ವಿತರಿಸಲು ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಜಾತ್ರೆ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಬಂದಿರುವ ವಲಸೆ ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯ ವತಿಯಿಂದ ಕಿಟ್ ವಿತರಿಸಲು ತಿಳಿಸಿದರು. ಪ್ರತಿದಿನ ಸ್ವಚ್ಛತೆ ಮತ್ತು ಸೋಂಕು ನಿವಾರಕ ಔಷಧಿಗಳನ್ನು ಸಿಂಪಡಣೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿದರು. ಜಿಲ್ಲೆಯ ಎಲ್ಲಾ ಝೋನ್​​ಗಳಲ್ಲಿ ಟ್ರ್ಯಾಕ್ಟರ್ ಮೂಲಕ ಮನೆ ಮನೆಗೆ ಪಡಿತರ ತಲುಪಿಸಲು ಜಿಲ್ಲಾಧಿಕಾರಿ ಡಾ. ಬೊಮ್ಮನಹಳ್ಳಿ ತಿಳಿಸಿದರು.

ಹಿರೇಬಾಗೇವಾಡಿ ಗ್ರಾಮದ 175 ಜನರ ಗಂಟಲು ದ್ರವ ಮಾದರಿಯ ವರದಿ ಬರಬೇಕಿದೆ. ಜನರಿಗೆ ತುರ್ತು ವೈದ್ಯಕೀಯ ಸೌಲಭ್ಯ ಒದಗಿಸಲು ಮೊಬೈಲ್ ಕ್ಲಿನಿಕ್ ಈಗಾಗಲೇ ಗ್ರಾಮಕ್ಕೆ ಒದಗಿಸಲಾಗಿದ್ದು, ಅವಶ್ಯಕತೆ ಆಧರಿಸಿ ಇನ್ನೂ ಎರಡು ಮೊಬೈಲ್ ಕ್ಲಿನಿಕ್ ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಹಾಲು, ದಿನಸಿ, ತರಕಾರಿ ಸೇರಿದಂತೆ ಎಲ್ಲಾ ಬಗೆಯ ಅಗತ್ಯ ವಸ್ತುಗಳ ಪೂರೈಕೆಗೆ ತುರ್ತು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಬೊಮ್ಮನಹಳ್ಳಿ ನಿರ್ದೇಶನ ನೀಡಿದರು.

ಸೋಂಕಿತರಲ್ಲೂ ಯಾವುದೇ ಲಕ್ಷಣಗಳು ಕಂಡು ಬಾರದಿರುವುದರಿಂದ ಎಲ್ಲರಿಗೂ ಏಕಕಾಲಕ್ಕೆ ಪರೀಕ್ಷೆ ಮಾಡುವುದು ವೈಜ್ಞಾನಿಕವಾಗಿ ಸೂಕ್ತವಲ್ಲ ಎಂದರು. ಜಾನುವಾರುಗಳಿಗೆ ಅಗತ್ಯ ಮೇವು ಒದಗಿಸುವ ಕೆಲಸ ಆಗಬೇಕು. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಕ್ರಮ ತೆಗೆದುಕೊಳ್ಳಬೇಕು. ಹಿರೇಬಾಗೇವಾಡಿ ಗ್ರಾಮದಲ್ಲಿ ಕೂಡ ಸರ್ಕಾರದಿಂದ ನೀಡಲಾಗುತ್ತಿರುವ ಉಚಿತ ಹಾಲು ಒದಗಿಸಬೇಕು. ತರಕಾರಿ ಮಾರಾಟಕ್ಕೆ ಗ್ರಾಮದಲ್ಲಿ ವ್ಯವಸ್ಥೆ ಕಲ್ಪಿಸಬೇಕು. ಗ್ರಾಮದಲ್ಲಿಯೇ ರೆಡ್ ಝೋನ್ ಪ್ರತ್ಯೇಕವಾಗಿ ಇರಿಸಿ ಉಳಿದ ಕಡೆ ತರಕಾರಿ ಮತ್ತಿತರ ಅಗತ್ಯ ವಸ್ತುಗಳ ಪೂರೈಕೆಗೆ ಅವಕಾಶ ಕಲ್ಪಿಸಬೇಕು. ನಿರಂತರವಾಗಿ ಕೆಲಸ ಮಾಡುತ್ತಿರುವ ಆರೋಗ್ಯ, ಪೊಲೀಸ್, ಅಂಗನವಾಡಿ ಕಾರ್ಯಕರ್ತೆಯರಿಗೆ ವಿಶ್ರಾಂತಿ ನೀಡಿ, ಬೇರೆ ಕಡೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್​ ಒತ್ತಾಯಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.