ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಅಥಣಿ ವಿಧಾನಸಭಾ ಮತಕ್ಷೇತ್ರದ ಶಾಸಕ ಮಹೇಶ್ ಕುಮಟಳ್ಳಿ ಕಾಣೆಯಾಗಿದ್ದು, ಹುಡುಕಿ ಕೊಡಿ ಎಂದು ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ಕಳೆದ 2018 ರ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಅಥಣಿ ಮತಕ್ಷೇತ್ರಕ್ಕೆ ಮಹೇಶ್ ಕುಮಟಳ್ಳಿ ಆಯ್ಕೆಯಾಗಿದ್ದರು. ಆದರೆ, ಸದ್ಯ ಅವರು ಕ್ಷೇತ್ರದಲ್ಲಿಲ್ಲ.
ಮಹೇಶ್ ಕುಮಟಳ್ಳಿ ಅವರು ಕೆಲ ದಿನಗಳಿಂದ ನಾಪತ್ತೆಯಾಗಿದ್ದಾರೆ. ನಮ್ಮ ಕ್ಷೇತ್ರದಲ್ಲಿ ಹಲವಾರು ಅಭಿವೃದ್ದಿ ಕೆಲಸಗಳನ್ನ ಮಾಡಬೇಕಾಗಿದೆ. ಈ ಭಾಗದಲ್ಲಿ ತೀವ್ರ ಬರಗಾಲ ಎದುರಿಸುತ್ತಿದ್ದೇವೆ. ದಯಮಾಡಿ ನಮ್ಮ ಶಾಸಕರನ್ನು ಹುಡುಕಿ ಕೊಡಿ ಎಂದು ಅಥಣಿ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಅಥಣಿ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.