ETV Bharat / state

ಬೆಳಗಾವಿಯಲ್ಲಿ ಮಹಾರಾಷ್ಟ್ರ ಬಸ್​ಗಳ ಮೇಲೆ ಕಲ್ಲು ತೂರಾಟ ಆರೋಪ: ಕರವೇ ಕಾರ್ಯಕರ್ತರ ವಿರುದ್ಧ ಎಫ್ಐಆರ್ - ಕರ್ನಾಟಕ ರಕ್ಷಣಾ ವೇದಿಕೆ

ಬೆಳಗಾವಿಯಲ್ಲಿ ಮಹಾರಾಷ್ಟ್ರ ಬಸ್​ಗಳ ಮೇಲೆ ಕಲ್ಲು ತೂರಾಟ ನಡೆಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ 12 ಮಂದಿ ಕರವೇ ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಬೆಳಗಾವಿಯಲ್ಲಿ ಮಹಾರಾಷ್ಟ್ರ ಬಸ್​ಗಳ ಮೇಲೆ ಕಲ್ಲು ತೂರಾಟ
Stone pelting on Maharashtra buses
author img

By

Published : Dec 7, 2022, 9:32 AM IST

ಬೆಳಗಾವಿ: ಮಹಾರಾಷ್ಟ್ರ ಬಸ್​ಗಳ ಮೇಲೆ ಕಲ್ಲು ತೂರಾಟ ನಡೆಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣಗೌಡ ಬಣದ 12 ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ನೇತೃತ್ವದಲ್ಲಿ ಬೆಳಗಾವಿ ನಗರದಲ್ಲಿ ಬೃಹತ್ ಪ್ರತಿಭಟನೆಗೆ ಕರೆ ನೀಡಲಾಗಿತ್ತು. ಆದ್ರೆ, ಪೊಲೀಸ್ ಇಲಾಖೆಯು ನಾರಾಯಣಗೌಡ ಸೇರಿದಂತೆ ಕಾರ್ಯಕರ್ತರನ್ನು ಹಿರೇಬಾಗೆವಾಡಿ ಟೋಲ್ ನಾಕಾ ಬಳಿ ತಡೆದು ಬೆಳಗಾವಿ ನಗರ ಪ್ರವೇಶಕ್ಕೆ ಅವಕಾಶ ನೀಡಿರಲಿಲ್ಲ. ಈ ವೇಳೆ ಕೆಲ ಕಾರ್ಯಕರ್ತರು ಮಹಾರಾಷ್ಟ್ರ ಬಸ್​ಗಳ ಮೇಲೆ ಕಲ್ಲು ತೂರಾಡಿದ್ದರು ಎನ್ನಲಾಗ್ತಿದೆ. ಇದಾದ ಬಳಿಕ ಪರಿಸ್ಥಿತಿ ಹದಗೆಡುತ್ತಿದ್ದಂತೆ ನೂರಾರು ಕರವೇ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಇದೀಗ ಹಿರೇಬಾಗೆವಾಡಿ ಪೊಲೀಸ್ ಠಾಣೆಯಲ್ಲಿ 12 ಕರವೇ ಕಾರ್ಯಕರ್ತರ ವಿರುದ್ಧ ಸ್ವಯಂ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಐಪಿಸಿ ಸೆಕ್ಷನ್ 143, 147, 341, 427, 149 ಅಡಿ ಗುಂಪು ಕಟ್ಟಿಕೊಂಡು ಗಲಾಟೆ ಮಾಡಿದ ಆರೋಪದಡಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ: ಬಸ್​ಗೆ ಕಪ್ಪು‌ ಮಸಿ‌ ಬಳಿದು ಕನ್ನಡಿಗರ ಆಕ್ರೋಶ

ಇನ್ನು, ಬೆಳಗಾವಿ ಪ್ರವೇಶಕ್ಕೆ ಅವಕಾಶ ಸಿಗದ ಹಿನ್ನೆಲೆ ಹಿರೇಬಾಗೆವಾಡಿ ಟೋಲ್‌ಗೇಟ್ ಬಳಿ ಬಸ್​ ಮಾತ್ರವಲ್ಲದೇ, ಮಹಾರಾಷ್ಟ್ರದ ಲಾರಿ ಮೇಲೆ ಸಹ ಕಲ್ಲು ತೂರಾಟ ನಡೆಸಿ, ಗಾಜು ಪುಡಿ ಪುಡಿ ಮಾಡಲಾಗಿದೆ. ಜೊತೆಗೆ ಕೆಲವು ವಾಹನಗಳ ನಂಬರ್ ಪ್ಲೇಟ್ ಕಿತ್ತು, ಮಸಿ ಬಳಿದ ಆರೋಪವಿದೆ.

ಇದನ್ನೂ ಓದಿ: ಬೆಳಗಾವಿಯಲ್ಲಿ ಕರವೇ ಪ್ರತಿಭಟನೆ: ಮಹಾರಾಷ್ಟ್ರ ಸಿಎಂ, ಡಿಸಿಎಂ ಪ್ರತಿಕೃತಿ ದಹನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.