ಬೆಳಗಾವಿ: ಕಟಾವಿಗೆ ಬಂದಿದ್ದ ಕಬ್ಬಿನ ಜಮೀನಿಗೆ ಬೆಂಕಿ ಬಿದ್ದ ಪರಿಣಾಮ ಅಂದಾಜು 5 ಎಕರೆ ಬೆಳೆ ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ಗೋಕಾಕ ತಾಲೂಕಿನ ಶಿಂಗಳಾಪುರ ಗ್ರಾಮದಲ್ಲಿ ಜರುಗಿದೆ.
ಗೋಕಾಕ ತಾಲೂಕಿನ ಶಿಂಗಳಾಪುರ ಗ್ರಾಮದ ಕಾಂಗ್ರೆಸ್ ಮುಖಂಡ ಆರೀಫ್ ಪೀರಜಾದೆ ಹಾಗೂ ಪಕ್ಕದ ವಿಠ್ಠಲ ಜಾಧವ ಎಂಬುವರ ಕಬ್ಬಿನ ಗದ್ದೆಗೆ ಬೆಂಕಿ ಬಿದ್ದಿದ್ದು ಕಟಾವಿಗೆ ಬಂದಿದ್ದ ಸುಮಾರು 5 ಎಕರೆ ಕಬ್ಬಿನ ಬೆಳೆ ಸುಟ್ಟು ಭಸ್ಮವಾಗಿದೆ.
ಓದಿ: ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು..!
ಸಾರ್ವಜನಿಕರ ಮಾಹಿತಿ ಮೇರೆಗೆ ಸ್ಥಳಕ್ಕೆ ದೌಡಾಯಿಸಿದ ಗೋಕಾಕ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗದ್ದೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದ್ದು, ಆರೋಪಿಗಳನ್ನು ತಕ್ಷಣವೇ ಪತ್ತೆ ಹಚ್ಚಿ ಕಠಿಣ ಕ್ರಮಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.