ETV Bharat / state

ಬೆಳಗಾವಿ ಜಿಲ್ಲೆಯಲ್ಲಿ ಕಬ್ಬಿನ ಗದ್ದೆಗೆ ಬೆಂಕಿ ಇಟ್ಟ ದುಷ್ಕರ್ಮಿಗಳು - ಕಬ್ಬಿನ ಗದ್ದೆಗೆ ಬೆಂಕಿ ಇಟ್ಟ ದುಷ್ಕರ್ಮಿಗಳು

ನಾವಲಗಟ್ಟಿ ಗ್ರಾಮದ ಚಂದ್ರಯ್ಯ ವಿರಕ್ತಮಠ ಎಂಬುವರಿಗೆ ಸೇರಿದ ಕಬ್ಬಿನ ಗದ್ದೆಗೆ ಬೆಂಕಿ ಹಚ್ಚಲಾಗಿದೆ. ವೈಯಕ್ತಿಕ ದ್ವೇಷ ಹಿನ್ನೆಲೆ ಬೆಂಕಿ ಹಚ್ಚಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ.

Fire to the cane Land in Belagavi
ಬೆಳಗಾವಿ ಜಿಲ್ಲೆಯಲ್ಲಿ ಕಬ್ಬಿನ ಗದ್ದೆಗೆ ಬೆಂಕಿ ಇಟ್ಟ ದುಷ್ಕರ್ಮಿಗಳು
author img

By

Published : Jan 25, 2021, 12:01 PM IST

Updated : Jan 25, 2021, 12:26 PM IST

ಬೆಳಗಾವಿ: ಫಸಲಿಗೆ ಬಂದಿದ್ದ ಕಬ್ಬಿನ ಗದ್ದೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟಿರುವ ಘಟನೆ ‌ಜಿಲ್ಲೆಯ ಬೈಲಹೊಂಗಲ ತಾಲೂಕಿನ ತಿಗಡಿ ಗ್ರಾಮದಲ್ಲಿ ನಡೆದಿದೆ.

ಕಬ್ಬಿನ ಗದ್ದೆಗೆ ಬೆಂಕಿ ಇಟ್ಟ ದುಷ್ಕರ್ಮಿಗಳು

ತಿಗಡಿ ಗ್ರಾಮದಲ್ಲಿ ದುಷ್ಕರ್ಮಿಗಳಿಂದ ಕಬ್ಬಿನ ಗದ್ದೆಗೆ ಬೆಂಕಿ ಇಟ್ಟಿದ್ದು, ಸುಮಾರು ಅರ್ಧ ಎಕರೆಗೂ ಹೆಚ್ಚು ಕಬ್ಬು ಬೆಂಕಿಗಾಹುತಿಯಾಗಿದೆ. ನಾವಲಗಟ್ಟಿ ಗ್ರಾಮದ ಚಂದ್ರಯ್ಯ ವಿರಕ್ತಮಠ ಎಂಬುವರಿಗೆ ಸೇರಿದ ಕಬ್ಬಿನ ಗದ್ದೆಗೆ ಬೆಂಕಿ ಹಚ್ಚಲಾಗಿದೆ. ವೈಯಕ್ತಿಕ ದ್ವೇಷ ಹಿನ್ನೆಲೆ ಬೆಂಕಿ ಹಚ್ಚಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ.

ಜಮೀನಿನಲ್ಲಿದ್ದ ಪಂಪ್‌ಸೆಟ್ ಸೇರಿ ಒಂದು ಲಕ್ಷ ರೂ.ಗೂ ಹೆಚ್ಚು ಹಾನಿ‌ಯಾಗಿದೆ. ಕಬ್ಬಿನ ಗದ್ದೆ ಬೆಂಕಿಗಾಹುತಿ ಆಗಿರುವುದರಿಂದ ಗದ್ದೆಯ ಮಾಲೀಕ ಕಂಗಾಲಾಗಿದ್ದಾರೆ. ಅದೃಷ್ಟವಶಾತ್ ಪಕ್ಕದ ಗದ್ದೆಗಳಿಗೆ ಬೆಂಕಿ ಆವರಿಸಿಲ್ಲ. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಓದಿ : ಕೋಲಾರದಲ್ಲಿ ಶಾಲಾ ವಾಹನ ಪಲ್ಟಿ: 15 ಮಕ್ಕಳಿಗೆ ಗಾಯ

Last Updated : Jan 25, 2021, 12:26 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.