ಬೆಳಗಾವಿ: ಉತ್ತರ ಕರ್ನಾಟಕದಲ್ಲಿ ಭೀಕರ ಪ್ರವಾಹ ಉಂಟಾಗಿದ್ದು, ಹಳ್ಳಿಗಳು ಮುಳುಗಿ ಹೋಗಿವೆ. ಆದರೆ ಇಲ್ಲಿನ ಯುವಕರು ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಪ್ರವಾಹದ ನೀರಿನಲ್ಲಿ ಈಜಿ ಗ್ರಾಮದ ಮುಂದೆ ಧ್ವಜಾರೋಹಣ ಮಾಡಿ ದೇಶಪ್ರೇಮ ಮೆರೆದಿದ್ದಾರೆ.
ಜಿಲ್ಲೆಯ ಅಥಣಿ ತಾಲೂಕಿನ ಇಂಗಳಗಾಂವಿ ಗ್ರಾಮದ ಯುವಕರು ಈ ಕಾರ್ಯ ಮಾಡಿದ್ದಾರೆ. ಪ್ರವಾಹವನ್ನು ಲೆಕ್ಕಿಸದೆ ನೀರಿನಲ್ಲಿ ಈಜಿ ಧ್ವಜಾರೋಹಣ ಮಾಡಿ, ಭಾರತ್ ಮಾತಾಕಿ ಜೈ ಎಂದು ಘೋಷಣೆ ಕೂಗಿ ಸಂಭ್ರಮಾಚರಣೆ ಮಾಡಿದ್ದಾರೆ.
73 ವರ್ಷಗಳ ಬಳಿಕ ಜಮ್ಮು-ಕಾಶ್ಮೀರದಲ್ಲಿ ತ್ರಿವರ್ಣ ಧ್ವಜ ಹಾರಾಡಿದೆ. ಈ ಸಂತೋಷದಿಂದ ನಾವು ಪ್ರವಾಹವನ್ನು ಸಹ ಲೆಕ್ಕಿಸದೆ ನಮ್ಮ ಊರಿನಲ್ಲಿ ಸ್ವಾತಂತ್ರ್ಯ ಆಚರಣೆ ಮಾಡಿದ್ದೇವೆ ಎಂದು ಇಲ್ಲಿನ ಗ್ರಾಮಸ್ಥರು ಹೇಳಿದ್ದಾರೆ.