ಬೆಳಗಾವಿ: ಜಿಲ್ಲೆಯಲ್ಲಿ ಕೋರ್ ಕಮಿಟಿ ಸಭೆ ನಡೆಯುತ್ತಿದ್ರೆ, ಮತ್ತೊಂದೆಡೆ ನೆರೆ ಪರಿಹಾರಕ್ಕಾಗಿ ಸಂತ್ರಸ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಖಾನಾಪುರ ತಾಲೂಕಿನ ಹಿರೇಹಟ್ಟಿಹೋಳಿ ಗ್ರಾಮದ ವೃದ್ಧರು ಮತ್ತು ಮಹಿಳೆಯರು, ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಕೊರೆಯುತ್ತಿರುವ ಚಳಿಯಲ್ಲೂ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.
ತಕ್ಷಣವೇ ನೆರೆ ಪರಿಹಾರ ನೀಡುವಂತೆ ಪ್ರತಿಭಟನಾಕಾರರು ಆಗ್ರಹಿಸುತ್ತಿದ್ದಾರೆ. ಕಳೆದ ಒಂದೂವರೆ ವರ್ಷದಿಂದ ಪರಿಹಾರ ನೀಡಿಲ್ಲ. ಸಿಎಂ ಯಡಿಯೂರಪ್ಪ ಸ್ಥಳಕ್ಕೆ ಬರಲೇಬೇಕು, ಕೂಡಲೇ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಸಿಎಂ ಬಾರದಿದ್ದರೆ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.