ETV Bharat / state

ಪ್ರವಾಹ ಮುನ್ನೆಚ್ಚರಿಕೆ ಕ್ರಮ: ಪರಿಸ್ಥಿತಿ ನಿರ್ವಹಣೆಗೆ ಸಿದ್ಧತೆ - ಪ್ರವಾಹ ಮುನ್ನೆಚ್ಚರಿಕೆ ಕ್ರಮ

ಚಿಕ್ಕೋಡಿ ಉಪ ವಿಭಾಗದ ಚಿಕ್ಕೋಡಿ, ರಾಯಬಾಗ ಹಾಗೂ ಅಥಣಿ ತಾಲೂಕಿನಲ್ಲಿ ಕೃಷ್ಣಾ ನದಿ, ದೂದಗಂಗಾ, ವೇದಗಂಗಾ ಹಾಗೂ ಪಂಚಗಂಗಾ ನದಿ ತೀರದ ಜನರನ್ನು ತುರ್ತು ಸಂದರ್ಭದಲ್ಲಿ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲು ಹಾಗೂ ಪರಿಹಾರ (ಗಂಜಿ) ಕೇಂದ್ರಗಳನ್ನು ಸ್ಥಾಪಿಸಲು ಸೂಕ್ತ ಸ್ಥಳಗಳನ್ನು ಮುಂಚಿತವಾಗಿಯೇ ಗುರುತಿಸಲಾಗಿದೆ ಎಂದು ಚಿಕ್ಕೋಡಿ ಉಪ ವಿಭಾಗಾಧಿಕಾರಿ ರವಿ ಕರಲಿಂಗಣ್ಣವರ ತಿಳಿಸಿದ್ದಾರೆ.

ಪ್ರವಾಹ ಮುನ್ನೆಚ್ಚರಿಕೆ ಕ್ರಮ: ಪರಿಸ್ಥಿತಿ ನಿರ್ವಹಣೆಗೆ ಸಿದ್ಧತೆ
author img

By

Published : Aug 3, 2019, 10:03 AM IST

ಚಿಕ್ಕೋಡಿ: ಬೆಳಗಾವಿ ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಾಗೂ ಮಹಾರಾಷ್ಟ್ರದ ಜಲಾಶಯಗಳಿಂದ ದಿಢೀರ್ ನೀರು ಬಿಟ್ಟರೆ ಕೃಷ್ಣಾ ಸೇರಿದಂತೆ ನದಿ ಪಾತ್ರದಲ್ಲಿರುವ ಚಿಕ್ಕೋಡಿ ಉಪ ವಿಭಾಗದ 37 ಗ್ರಾಮಗಳು ಪ್ರವಾಹದಿಂದ ತೊಂದರೆ ಅನುಭವಿಸುತ್ತವೆ ಹಾಗೂ 39 ಗ್ರಾಮಗಳು ಪ್ರವಾಹದಿಂದ ತೊಂದರೆ ಅನುಭವಿಸುವ ಸಾಧ್ಯತೆ ಇದೆ ಎಂದು ಚಿಕ್ಕೋಡಿ ಉಪ ವಿಭಾಗಾಧಿಕಾರಿ ರವಿ ಕರಲಿಂಗಣ್ಣವರ ತಿಳಿಸಿದ್ದಾರೆ.

ಪ್ರವಾಹ ಮುನ್ನೆಚ್ಚರಿಕೆ ಕ್ರಮ: ಪರಿಸ್ಥಿತಿ ನಿರ್ವಹಣೆಗೆ ಸಿದ್ಧತೆ

ಚಿಕ್ಕೋಡಿ ಉಪ ವಿಭಾಗದ ಚಿಕ್ಕೋಡಿ, ರಾಯಬಾಗ ಹಾಗೂ ಅಥಣಿ ತಾಲೂಕಿನಲ್ಲಿ ಕೃಷ್ಣಾ ನದಿ, ದೂದಗಂಗಾ, ವೇದಗಂಗಾ ಹಾಗೂ ಪಂಚಗಂಗಾ ನದಿ ತೀರದ ಜನರನ್ನು ತುರ್ತು ಸಂದರ್ಭದಲ್ಲಿ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲು ಹಾಗೂ ಪರಿಹಾರ (ಗಂಜಿ) ಕೇಂದ್ರಗಳನ್ನು ಸ್ಥಾಪಿಸಲು ಸೂಕ್ತ ಸ್ಥಳಗಳನ್ನು ಮುಂಚಿತವಾಗಿಯೇ ಗುರುತಿಸಲಾಗಿದೆ.

ನದಿ ತೀರದ ಗ್ರಾಮಸ್ಥರು ಮುನ್ನೆಚ್ಚರಿಕೆ ಕ್ರಮವಾಗಿ ಸಾಧ್ಯವಾದಷ್ಟು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳಬೇಕು.
ಮುಳುಗಡೆಗೊಂಡಿರುವ ಸೇತುವೆಗಳನ್ನು ದಾಟುವ ಸಾಹಸಕ್ಕೆ ಮುಂದಾಗಬಾರದು. ತುರ್ತು ಸಂದರ್ಭದಲ್ಲಿ ತಕ್ಷಣವೇ ಸ್ಥಳೀಯ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದು ಉಪ ವಿಭಾಗಾಧಿಕಾರಿ ರವಿ ಕರಲಿಂಗಣ್ಣವರ ಮನವಿ ಮಾಡಿಕೊಂಡಿದ್ದಾರೆ.

ತೀವ್ರ ಪ್ರವಾಹಕ್ಕೆ ಒಳಗಾಗುವ ಗ್ರಾಮಗಳು:

ಚಿಕ್ಕೋಡಿ ತಾಲೂಕು - ಕಲ್ಲೋಳ, ಯಡೂರ, ಇಂಗಳಿ, ಚಂದೂರ, ಮಾಂಜರಿ, ಬಾರವಾಡ ಹಾಗೂ ಹುನ್ನರಗಿ.

ರಾಯಬಾಗ ತಾಲೂಕು- ಹಳೇ ದಿಗ್ಗೇವಾಡಿ, ಗುಂಡವಾಡ, ಶಿರಗೂರ, ಖೇಮಲಾಪುರ, ಸಿದ್ದಾಪುರ

ಅಥಣಿ ತಾಲೂಕು- ಮೊಳವಾಡ, ಕುಸನಾಳ, ಕೃಷ್ಣಾ ಕಿತ್ತೂರ, ಬಣಜವಾಡ, ತೀರ್ಥ, ನದಿಇಂಗಳಗಾಂವ, ದರೂರ, ಕವಟಕೊಪ್ಪ, ಶೇಗುಣಶಿ, ಹುಲಬಾಳಿ, ಅವರಖೋಡ, ನಾಗನೂರ ಪಿ.ಕೆ., ಸತ್ತಿ, ಮಹಿಷವಾಡಗಿ, ಜನವಾಡ, ಸವದಿ ದರ್ಗಾ, ಶಿರಹಟ್ಟಿ, ಕಾತ್ರಾಳ, ಝುಂಜರವಾಡ, ನಂದೇಶ್ವರ, ಸಪ್ತಸಾಗರ, ಮಂಗಾವತಿ, ಜುಗೂಳ, ಶಹಾಪುರ.

ಈ ಎಲ್ಲ ಗ್ರಾಮದವರಿಗೆ ಹೈ ಅಲರ್ಟ್​ ಘೋಷಣೆ ಮಾಡಿದ್ದು, ಹಾಗೂ ಅವರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Intro:ಪ್ರವಾಹ ಮುನ್ನೆಚ್ಚರಿಕೆ ಕ್ರಮ : ಪರಿಸ್ಥಿತಿ ನಿರ್ವಹಣೆಗೆ ಸಿದ್ಧತೆBody:

ಚಿಕ್ಕೋಡಿ :

ಬೆಳಗಾವಿ ಜಿಲ್ಲೆಯಲ್ಲಿ ವ್ಯಾಪಕ ಮಳೆಯಿಂದ ಮತ್ತು ಮಹಾರಾಷ್ಟ್ರದ ಜಲಾಶಯಗಳಿಂದ ದಿಢೀರ್ ನೀರು ಬಿಟ್ಟರೆ ಕೃಷ್ಣಾ ಸೇರಿದಂತೆ ವಿವಿಧ ನದಿ ಪಾತ್ರದಲ್ಲಿರುವ ಚಿಕ್ಕೋಡಿ ಉಪ ವಿಭಾಗದ 37 ಗ್ರಾಮಗಳು ಪ್ರವಾಹದಿಂದ ತೊಂದರೆ ಅನುಭವಿಸುತ್ತಿವೆ ಹಾಗೂ 39 ಗ್ರಾಮಗಳು ಪ್ರವಾಹದಿಂದ ತೊಂದರೆ ಅನುಭವಿಸುವ ಸಾಧ್ಯತೆ ಇದೆ ಎಂದು ಚಿಕ್ಕೋಡಿ ಉಪ ವಿಭಾಗಾಧಿಕಾರಿ ರವಿ ಕರಲಿಂಗಣ್ಣವರ ತಿಳಿಸಿದ್ದಾರೆ.

ಚಿಕ್ಕೋಡಿ ಉಪ ವಿಭಾಗದ ಚಿಕ್ಕೋಡಿ, ರಾಯಬಾಗ ಹಾಗೂ ಅಥಣಿ ತಾಲ್ಲೂಕಿನಲ್ಲಿ ಕೃಷ್ಣಾ, ದೂದಗಂಗಾ, ವೇದಗಂಗಾ ಹಾಗೂ ಪಂಚಗಂಗಾ ನದಿ ತೀರದ ತುರ್ತು ಸಂದರ್ಭದಲ್ಲಿ ನದಿ ತೀರದ ಜನರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲು ಹಾಗೂ ಪರಿಹಾರ (ಗಂಜಿ) ಕೇಂದ್ರಗಳನ್ನು ಸ್ಥಾಪಿಸಲು ಸೂಕ್ತ ಸ್ಥಳಗಳನ್ನು ಮುಂಚಿತವಾಗಿಯೇ ಗುರುತಿಸಲಾಗಿದೆ.

ನದಿ ತೀರದ ಗ್ರಾಮಸ್ಥರು ಮುನ್ನೆಚ್ಚರಿಕೆ ಕ್ರಮವಾಗಿ ಸಾಧ್ಯವಾದಷ್ಟು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳಬೇಕು.
ಮುಳುಗಡೆಗೊಂಡಿರುವ ಸೇತುವೆಗಳನ್ನು ದಾಟುವ ಸಾಹಸಕ್ಕೆ ಮುಂದಾಗಬಾರದು. ತುರ್ತು ಸಂದರ್ಭದಲ್ಲಿ ತಕ್ಷಣವೇ ಸ್ಥಳೀಯ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದು ಉಪ ವಿಭಾಗಾಧಿಕಾರಿ ರವಿ ಕರಲಿಂಗಣ್ಣವರ ಮನವಿ ಮಾಡಿಕೊಂಡಿದ್ದಾರೆ.

ತೀವ್ರ ಪ್ರವಾಹಕ್ಕೆ ಒಳಗಾಗುವ ಗ್ರಾಮಗಳು :

ಚಿಕ್ಕೋಡಿ ತಾಲ್ಲೂಕು- ಕಲ್ಲೋಳ, ಯಡೂರ, ಇಂಗಳಿ, ಚಂದೂರ, ಮಾಂಜರಿ, ಬಾರವಾಡ ಹಾಗೂ ಹುನ್ನರಗಿ.

ರಾಯಬಾಗ ತಾಲ್ಲೂಕು-ಹಳೇ ದಿಗ್ಗೇವಾಡಿ, ಗುಂಡವಾಡ, ಶಿರಗೂರ, ಖೇಮಲಾಪುರ, ಸಿದ್ದಾಪುರ

ಅಥಣಿ ತಾಲ್ಲೂಕು-ಮೊಳವಾಡ, ಕುಸನಾಳ, ಕೃಷ್ಣಾ ಕಿತ್ತೂರ, ಬಣಜವಾಡ, ತೀರ್ಥ, ನದಿಇಂಗಳಗಾಂವ, ದರೂರ, ಕವಟಕೊಪ್ಪ, ಶೇಗುಣಶಿ, ಹುಲಬಾಳಿ, ಅವರಖೋಡ, ನಾಗನೂರ ಪಿ.ಕೆ., ಸತ್ತಿ, ಮಹಿಷವಾಡಗಿ, ಜನವಾಡ, ಸವದಿ ದರ್ಗಾ, ಶಿರಹಟ್ಟಿ, ಕಾತ್ರಾಳ, ಝುಂಜರವಾಡ, ನಂದೇಶ್ವರ, ಸಪ್ತಸಾಗರ, ಮಂಗಾವತಿ, ಜುಗೂಳ, ಶಹಾಪುರ.

ಈ ಎಲ್ಲ ಗ್ರಾಮದವರಿಗೆ ಹೈ ಅಲರ್ಟ ಘೋಷಣೆ ಮಾಡಿದ್ದು ಹಾಗೂ ಅವರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Conclusion:ಸಂಜಯ ಕೌಲಗಿ
ಚಿಕ್ಕೋಡಿ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.