ETV Bharat / state

ಕೃಷ್ಣಾ ನದಿಗೆ ಪ್ರವಾಹದ ಭೀತಿ.. ಎನ್‌ಡಿಆರ್‌ಎಫ್ ತಂಡ ಅಲರ್ಟ್​

ಚಿಕ್ಕೋಡಿ ತಾಲೂಕಿನ ಕೃಷ್ಣಾ, ವೇದಗಂಗಾ, ದೂಧಗಂಗಾ ನದಿಗಳಿಗೆ ಸಣ್ಣ ಪ್ರಮಾಣದಲ್ಲಿ ನೀರು ಏರಿಕೆಯಾಗುತ್ತಿದೆ. ಇದು ಪ್ರವಾಹದ ಮುನ್ಸೂಚನೆಯನ್ನು ನೀಡುತ್ತಿದ್ದು, ಈ ಕಾರಣಕ್ಕಾಗಿ ಯಾವುದೇ ಪ್ರಾಣ ಹಾನಿ ಆಗದಂತೆ ಜಿಲ್ಲಾಡಳಿತ ಹಾಗೂ ತಾಲೂಕಾಡಳಿತ ಮುಂಜಾಗ್ರತಾ ಕ್ರಮವಾಗಿ ಈ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡವನ್ನು ನಿಯೋಜಿಸಿವೆ.

ndrf-team-deployment
ಎನ್‌ಡಿಆರ್‌ಎಫ್ ತಂಡ ನಿಯೋಜನೆ
author img

By

Published : Jun 10, 2021, 6:21 PM IST

ಚಿಕ್ಕೋಡಿ: ಕಳೆದ ಎರಡ್ಮೂರು ವರ್ಷಗಳಿಂದ ಚಿಕ್ಕೋಡಿ ಉಪವಿಭಾಗದಲ್ಲಿ ಹಾಗೂ ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆ, ಕೃಷ್ಣಾ ನದಿಗೆ ಪ್ರವಾಹದ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಗಡಿ ಭಾಗದ ಜನರಿಗೆ ತೊಂದರೆಯಾಗಬಾರದೆಂದು ಮುಂಜಾಗ್ರತ ಕ್ರಮವಾಗಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಉಪವಿಭಾಗಕ್ಕೆ ಎನ್‌ಡಿಆರ್‌ಎಫ್ ತಂಡ ಬಂದಿಳಿದಿದ್ದು, ಯಡೂರ ಗ್ರಾಮದಲ್ಲಿ ಬೀಡುಬಿಟ್ಟಿದೆ. ಕೊರೊನಾ ಆತಂಕದ ನಡುವೆ ಚಿಕ್ಕೋಡಿ ತಾಲೂಕಿನ ನದಿಗಳಿಗೆ ಪ್ರವಾಹದ ಪರಿಸ್ಥಿತಿ ಎದುರಾಗುತ್ತಿದೆ.

ಓದಿ: ಮುಖ್ಯಮಂತ್ರಿಯಾಗಿ ಬಿಎಸ್​ವೈ ಮುಂದುವರೆಯಲಿದ್ದಾರೆ: ಅರುಣ್ ಸಿಂಗ್ ಸ್ಪಷ್ಟನೆ

ಹೀಗಾಗಿ ಜಿಲ್ಲಾಡಳಿತ ಹಾಗೂ ತಾಲೂಕಾಡಳಿತ ಮುಂಜಾಗ್ರತಾ ಕ್ರಮವಾಗಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಸಿದ್ಧವಾಗಿದೆ. ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮದ ಕೃಷ್ಣಾ ನದಿ ತೀರದಲ್ಲಿ 21 ಜನರ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡವನ್ನು ನಿಯೋಜಿಸಲಾಗಿದೆ.

ಸದ್ಯ ಯಡೂರ ಗ್ರಾಮಕ್ಕೆ ಎನ್‌ಡಿಆರ್‌ಎಫ್ ತಂಡ ಆಗಮಿಸಿದೆ. ಇಲ್ಲಿಯ ಸಿದ್ಧ ತೀರ್ಥ ಯಾತ್ರಿ ನಿವಾಸದಲ್ಲಿ ಬೀಡು ಬಿಟ್ಟಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ಪ್ರಾರಂಭವಾಗಿದೆ. ಹೀಗಾಗಿ ಚಿಕ್ಕೋಡಿ ತಾಲೂಕಿನ ಕೃಷ್ಣಾ, ವೇದಗಂಗಾ, ದೂಧಗಂಗಾ ನದಿಗಳಿಗೆ ಸಣ್ಣ ಪ್ರಮಾಣದಲ್ಲಿ ನೀರು ಏರಿಕೆಯಾಗುತ್ತಿದೆ. ಇದು ಪ್ರವಾಹದ ಮುನ್ಸೂಚನೆಯನ್ನು ನೀಡುತ್ತಿದ್ದು, ಈ ಕಾರಣಕ್ಕಾಗಿ ಯಾವುದೇ ಪ್ರಾಣ ಹಾನಿ ಆಗದಂತೆ ಜಿಲ್ಲಾಡಳಿತ ಹಾಗೂ ತಾಲೂಕಾಡಳಿತ ಮುಂಜಾಗ್ರತಾ ಕ್ರಮವಾಗಿ ಈ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡವನ್ನು ನಿಯೋಜಿಸಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.