ಬೆಳಗಾವಿ: ಪ್ರವಾಹ ಪೀಡಿತ ಪ್ರದೇಶಗಳ ಪರಿಶೀಲನೆ ವೇಳೆ ರಸ್ತೆ ಮಧ್ಯೆ ಮಹಿಳೆಯರು ಭತ್ತದ ನಾಟಿ ಮಾಡುತ್ತಿರುವುದನ್ನು ಕಂಡ ಶಾಸಕಿ ಅಂಜಲಿ ನಿಂಬಾಳ್ಕರ್, ಭತ್ತದ ನಾಟಿ ಮಾಡಿ ರಿಲ್ಯಾಕ್ಸ್ ಆಗಿದ್ದಾರೆ.
ಕಳೆದೊಂದು ವಾರದಿಂದ ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮಲಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಖಾನಾಪುರ ತಾಲೂಕಿನ ನದಿ ಪಾತ್ರದ ಜನರು ಪ್ರವಾಹ ಭೀತಿ ಎದುರಿಸುತ್ತಿದ್ದಾರೆ. ತಕ್ಷಣವೇ ಕಾರ್ಯೋನ್ಮುಖರಾಗಿರುವ ಶಾಸಕಿ ಅಂಜಲಿ ನಿಂಬಾಳ್ಕರ್ ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.
ಖಾನಾಪುರದಲ್ಲಿ ಬಿಟ್ಟೂ ಬಿಡದೇ ಸುರಿಯುತ್ತಿರುವ ಮಳೆಗೆ ಬಹುತೇಕ ಸೇತುವೆ ಮುಳುಗಡೆಯಾಗಿವೆ. ಇಪ್ಪತ್ತಕ್ಕೂ ಅಧಿಕ ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ಶಾಸಕಿ ಭತ್ತದ ನಾಟಿ ಮಾಡುವುದನ್ನು ಕಂಡು ರೈತ ಮಹಿಳೆಯರು ಸಂತಸ ವ್ಯಕ್ತಪಡಿಸಿದ್ದಾರೆ. ಕೊರೊನಾ ಹಾಗೂ ಮಳೆಯಿಂದ ರಕ್ಷಣೆ ಬಗ್ಗೆ ಮುನ್ನೆಚ್ಚರಿಕೆ ವಹಿಸುವಂತೆ ಶಾಸಕಿ ಮಹಿಳೆಯರಿಗೆ ಸಲಹೆ ನೀಡಿದ್ದಾರೆ.