ETV Bharat / state

ಮಲಪ್ರಭಾ ನದಿ ಆರ್ಭಟಕ್ಕೆ ರಾಮದುರ್ಗದ 15 ಗ್ರಾಮಗಳಲ್ಲಿ ಪ್ರವಾಹ ಭೀತಿ: ಹೈ ಅಲರ್ಟ್​​ ಘೋಷಣೆ - Floods

ಮಲಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಕಾರಣ ರಾಮದುರ್ಗ ತಾಲೂಕಿನ 15ಕ್ಕೂ ಹೆಚ್ಚು ಗ್ರಾಮಗಳಿಗೆ ನೀರು ನುಗ್ಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ರಾಮದುರ್ಗದ 15 ಗ್ರಾಮಗಳಲ್ಲಿ ಪ್ರವಾಹ ಭೀತಿ: ಹೈ ಅಲರ್ಟ್​ ಘೋಷಣೆ
author img

By

Published : Sep 8, 2019, 8:29 PM IST

ಬೆಳಗಾವಿ: ಧಾರಾಕಾರ ಮಳೆಯಿಂದ ಜಿಲ್ಲೆಯ ಅನೇಕ ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ರಾಮದುರ್ಗದ 15 ಗ್ರಾಮಗಳಲ್ಲಿ ಪ್ರವಾಹ ಭೀತಿ: ಹೈ ಅಲರ್ಟ್​ ಘೋಷಣೆ

ಮಲಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಕಾರಣ ರಾಮದುರ್ಗ ತಾಲೂಕಿನ 15ಕ್ಕೂ ಹೆಚ್ಚು ಗ್ರಾಮಗಳಿಗೆ ನೀರು ನುಗ್ಗಿದೆ. ಹೀಗಾಗಿ ಗ್ರಾಮದ ಜನರು ಮನೆಗಳನ್ನು ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ. ಮಲಪ್ರಭಾ ನದಿಯಲ್ಲಿ ಒಳಹರಿವು ಹೆಚ್ಚಾಗಿದ್ದು, ನವಿಲುತೀರ್ಥ ಡ್ಯಾಂನಿಂದ 22 ಸಾವಿರ ಕ್ಯೂಸೆಕ್ ನೀರು ಹೊರ ಬಿಡಲಾಗುತ್ತಿದೆ.

ರಾಮದುರ್ಗ ತಾಲೂಕಿನ ಅವರಾದಿ, ಸುನ್ನಾಳ, ಸುರೇಬಾನ್ ಗ್ರಾಮಗಳಿಗೆ ಜಲ ದಿಗ್ಬಂಧನ ಹಾಕಿದೆ. ಸುರೇಬಾನ ಗ್ರಾಮದ ಸರ್ಕಾರಿ ಶಾಲೆಯ ಸುತ್ತಲೂ ನೀರು ತುಂಬಿಕೊಂಡಿದೆ. ಅವರಾದಿ ಗ್ರಾಮದಲ್ಲಿರುವ 300ಕ್ಕೂ ಹೆಚ್ಚು ಕುಟುಂಬಗಳನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗುತ್ತಿದೆ. ಇನ್ನು ಹಲವು ಹಳ್ಳಿಗಳು ಪ್ರವಾಹ ಭೀತಿಯಲ್ಲಿವೆ. ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಾಲೂಕು ಆಡಳಿತ ಕಟ್ಟೆಚ್ಚರದಿಂದ ಇರುವಂತೆ ನದಿ ಪಾತ್ರದ ಜನರನ್ನು ಎಚ್ಚರಿಸಿದೆ.

Intro:ರಾಮದುರ್ಗದ 15 ಗ್ರಾಮಗಳಲ್ಲಿ ಪ್ರವಾಹದ ಭೀತಿ : ತಾಲೂಕ ಆಡಳಿತದಿಂದ ಹೈ ಅಲರ್ಟ

ಬೆಳಗಾವಿ : ಸತತವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಜಿಲ್ಲೆಯ ಅನೇಕ ಗ್ರಾಮಗಳಲ್ಲಿ ಪ್ರವಾಹದ ಭೀತಿ ಎದುರಾಗಿದ್ದು ಸಂಪೂರ್ಣ ಜನಜೀವನ ಅಸ್ತವ್ಯಸ್ತವಾಗಿದೆ.

Body:ಮಲಪ್ರಭಾ ನದಿ ಪ್ರವಾಹದ ಮಟ್ಟ ಮೀರಿ ಹರಿಯುತ್ತಿರುವ ಕಾರಣ ರಾಮದುರ್ಗ ತಾಲೂಕಿನ ಹದಿನೈದಕ್ಕೂ ಹೆಚ್ಚು ಗ್ರಾಮಗಳಲ್ಲಿ ನೀರು ನುಗಿದ್ದು ಗ್ರಾಮದ ಜನರು ಕಂಗಾಲಾಗಿದ್ದಾರೆ. ಮಲಪ್ರಭಾ ನದಿಯಲ್ಲಿ ಒಳಹರಿವು ಹೆಚ್ಚಾಗಿದ್ದು ನವಿಲುತೀರ್ಥ ಜಲಾಶಯದಿಂದ 22 ಸಾವಿರ ಕ್ಯೂಸೆಕ್ ನೀರು ಹೊರ ಬಿಡಲಾಗುತ್ತಿದೆ.

Conclusion:ರಾಮದುರ್ಗ ತಾಲೂಕಿನ ಅವರಾದಿ, ಸುನ್ನಾಳ, ಸುರೇಬಾನ್ ಗ್ರಾಮಕ್ಕೆ ನುಗ್ಗಿದ ನೀರು ನುಗಿದ್ದು, ಸುರೇಬಾನ ಗ್ರಾಮದ ಗ್ರಾಮದ ಸರಕಾರಿ ಶಾಲೆಯ ಸುತ್ತುವರೆದ ನೀರು ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಅವರಾದಿ ಗ್ರಾಮದಲ್ಲಿರುವ 300 ಕ್ಕೂ ಹೆಚ್ಚು ಕುಟುಂಬಗಳು ಬೇರೆಡೆ ಸ್ಥಳಾಂತರ ಮಾಡಲಾಗುತ್ತಿದ್ದು ಇನ್ನು ಹಲವು ಹಳ್ಳಿಗಳಿಗೆ ಪ್ರವಾಹದ ಬೀತಿ. ತೀವ್ರ ಮಳೆಯಿಂದ ಈ ರೀತಿಯ ಪ್ರವಾಹ ಉಂಟಾಗುತ್ತಿದ್ದು ಜನರಲ್ಲಿ ಆತಂಕ ಶುರುವಾಗಿದೆ. ಜೊತೆಗೆ ತಾಲೂಕ ಆಡಳಿತದಿಂದ ಹೈ ಅಲರ್ಟ ಘೋಷಿಸಿದೆ.

ವಿನಾಯಕ ಮಠಪತಿ
ಬೆಳಗಾವಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.