ಬೆಳಗಾವಿ : ಪೂರ್ಣ ಪ್ರಮಾಣದ ಸರ್ಕಾರ ಇದ್ದರೂ ಸಚಿವರಿಲ್ಲದ ಕಾರಣ ಪ್ರವಾಹ ಪರಿಸ್ಥಿತಿ ಎದುರಿಸಲು ತೊಂದರೆ ಆಗುತ್ತದೆ. ಮುಖ್ಯಮಂತ್ರಿಗಳು ಅಧಿಕಾರಿಗಳನ್ನು ಗಮನಕ್ಕೆ ತೆಗೆದುಕೊಂಡು ಕೆಲಸ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.
ಉತ್ತರ ಕರ್ನಾಟಕದಲ್ಲಿ ಉಂಟಾಗಿರುವ ಪ್ರವಾಹದ ಜಾಗಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಸರ್ಕಾರದಲ್ಲಿ ಸಚಿವರಿಲ್ಲದ ಕಾರಣ ಅಧಿಕಾರಿಗಳ ಮೇಲೆ ಹೆಚ್ಚಿನ ಜವಾಬ್ದಾರಿ ಇದ್ದು ಜನರ ಸಂಕಷ್ಟಕ್ಕೆ ಸರಿಯಾದ ರೀತಿಯಲ್ಲಿ ಸ್ಪಂದನೆ ನೀಡಬೇಕು ಎಂದು ಸೂಚಿಸಿದರು.
ಇದೇ ಸಮಯದಲ್ಲಿ ಮುಖ್ಯಮಂತ್ರಿ ವಿರುದ್ಧ ಅಸಮಾಧಾನ ಹೊರ ಹಾಕಿದ ಕುಮಾರಸ್ವಾಮಿ. ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದ್ದು ಸಿಎಂ ಸಚಿವ ಸಂಪುಟ ವಿಸ್ತರಣೆ ಮಾಡಿಲ್ಲ. ಜನರಿಗೆ ಸರ್ಕಾರ ಸ್ಪಂದನೆ ದೊರೆಯುತ್ತಿಲ್ಲ. 2005 ರಲ್ಲಿ ಉಂಟಾಗಿದ್ದ ಪ್ರವಾಹಕ್ಕಿಂತ ಈ ವರ್ಷ ಜಾಸ್ತಿ ಆಗಿದ್ದು, ಜನರ ಕಷ್ಟಗಳನ್ನು ಯಾರು ನೋಡಿಕೊಳ್ಳುವರು ಎಂದು ಪ್ರಶ್ನಿಸಿದರು.