ETV Bharat / state

ಫಡ್ನವಿಸ್,ರಮೇಶ್ ಜಾರಕಿಹೊಳಿ ಭೇಟಿ: ಮಹಾರಾಷ್ಟ್ರದಲ್ಲಿ ಆಪರೇಶನ್ ಕಮಲ..? - Water Resources Minister Ramesh Zarakiholi

ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ,ಮಹಾರಾಷ್ಟ್ರ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಇದರಿಂದ ರಾಜಕೀಯ ವಲಯದಲ್ಲಿ ಸಂಚಲನ ಉಂಟಾಗಿದೆ.

dsd
ಫಡ್ನವಿಸ್,ರಮೇಶ್ ಜಾರಕಿಹೊಳಿ ಭೇಟಿ
author img

By

Published : Sep 17, 2020, 2:32 PM IST

ಬೆಳಗಾವಿ: ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಮಹಾರಾಷ್ಟ್ರ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ದಿಢೀರ್ ಭೇಟಿಯಾಗಿ ಒಂದು ಗಂಟೆ ಚರ್ಚೆ ನಡೆಸಿದ್ದಾರೆ.

ಮೂಲಗಳ ಪ್ರಕಾರ ಬಿಜೆಪಿ ಹೈಕಮಾಂಡ್ ಸೂಚನೆ ಮೇರೆಗೆ ದೆಹಲಿಯ ಖಾಸಗಿ ಹೋಟೆಲ್​ವೊಂದರಲ್ಲಿ ರಮೇಶ್ ಜಾರಕಿಹೊಳಿ ಫಡ್ನವಿಸ್​ರನ್ನು ಭೇಟಿಯಾಗಿದ್ದಾರೆ ಎನ್ನಲಾಗುತ್ತಿದೆ. ಕೋವಿಡ್ ‌ನಿಯಂತ್ರಣದಲ್ಲಿ ವೈಫಲ್ಯ ಹಾಗೂ ಚಿತ್ರ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಮಹಾರಾಷ್ಟ್ರ ಸರ್ಕಾರ ಜನರ ನಂಬಿಕೆ ಕ್ಷೀಣಿಸತೊಡಗಿದೆ ಎನ್ನಲಾಗಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ‌ ನಡ್ಡಾ ಸೂಚನೆಯಂತೆಯೇ ಹಲವಾರು ವಿಷಯಗಳನ್ನು ಉಭಯ ನಾಯಕರು ಚರ್ಚಿಸಿದ್ದಾರೆ ಎನ್ನಲಾಗಿದೆ. ಮಹಾರಾಷ್ಟ್ರದಲ್ಲಿ ಆಪರೇಷನ್ ಕಮಲ ಆರಂಭಿಸುವ ಬಗ್ಗೆ ಇಬ್ಬರ ಭೇಟಿ ವೇಳೆ ಚರ್ಚೆ ನಡೆದಿದೆ ಎಂದು ಸಚಿವರ ಮೂಲಗಳು ಖಚಿತಪಡಿಸಿವೆ.ಮಹಾರಾಷ್ಟ್ರ ರಾಜಕಾರಣದಲ್ಲಿ ಸಚಿವ ರಮೇಶ್ ಜಾರಕಿಹೊಳಿ ಹಿಡಿತ ಹೊಂದಿದ್ದು ಉಭಯ ನಾಯಕರ ಭೇಟಿ ಭಾರಿ ಚರ್ಚೆಗೆ ಕಾರಣವಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.