ETV Bharat / state

ಸ್ವಂತ ಖರ್ಚಿನಲ್ಲಿ ಸರ್ಕಾರಿ ಆಸ್ಪತ್ರೆಗೆ ಸಿಬ್ಬಂದಿಯನ್ನ ನೇಮಕ ಮಾಡಿದ ಮಾಜಿ ಸಚಿವ ಪ್ರಕಾಶ್ ಹುಕ್ಕೇರಿ - ಚಿಕ್ಕೋಡಿ ಆಸ್ಪತ್ಪತ್ರೆ

ಕೆಲ ಸರ್ಕಾರಿ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ಇದ್ದ ಹಿನ್ನೆಲೆ, ಜನರ ಹಿತದೃಷ್ಟಿಯಿಂದ ಸರ್ಕಾರದ ಆದೇಶಕ್ಕೆ ಕಾಯದೆ ಅನ್ನಪೂರ್ಣೇಶ್ವರಿ ಫೌಂಡೇಶನ್ ವತಿಯಿಂದ 14 ಜನ ನುರಿತ ಸಿಬ್ಬಂದಿಯನ್ನು ನೇಮಕಾತಿ ಮಾಡಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಪ್ರಕಾಶ್ ಹುಕ್ಕೇರಿ ತಿಳಿಸಿದರು.

ಚಿಕ್ಕೋಡಿ
ಚಿಕ್ಕೋಡಿ
author img

By

Published : May 7, 2021, 9:02 PM IST

Updated : May 7, 2021, 9:16 PM IST

ಚಿಕ್ಕೋಡಿ : ಅನೇಕ ಅಮಾಯಕ ಕೊರೊನಾ ಸೋಂಕಿತರು ಸೂಕ್ತ ಚಿಕಿತ್ಸೆ ಇಲ್ಲದೆ ಸಾವನ್ನಪ್ಪುತ್ತಿದ್ದಾರೆ. ಇದನ್ನು ಗಮನದಲ್ಲಿಟ್ಟುಕೊಂಡು ಚಿಕ್ಕೋಡಿ-ಸದಲಗಾ ಮತಕ್ಷೇತ್ರದಲ್ಲಿ ಸೋಂಕು ಹರಡುವಿಕೆ ಕಡಿಮೆ ಮಾಡುವ ದೃಷ್ಟಿಯಿಂದ ಚಿಕ್ಕೋಡಿ ಶಾಸಕ ಗಣೇಶ್ ಹುಕ್ಕೇರಿ ಅಂಕಲಿ, ಚಿಕ್ಕೋಡಿ ಹಾಗೂ ಯಕ್ಸಂಬಾ ಪಟ್ಟಣದಲ್ಲಿ ಕೋವಿಡ್ ಆಸ್ಪತ್ರೆಯನ್ನ ಆರಂಭ ಮಾಡಿದ್ದಾರೆ.

ಕೆಲವು ಸರ್ಕಾರಿ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ಇದ್ದ ಹಿನ್ನೆಲೆ, ಜನರ ಹಿತದೃಷ್ಟಿಯಿಂದ ಸರ್ಕಾರದ ಆದೇಶಕ್ಕೆ ಕಾಯದೆ ಅನ್ನಪೂರ್ಣೇಶ್ವರಿ ಫೌಂಡೇಶನ್ ವತಿಯಿಂದ 14 ಜನ ನುರಿತ ಸಿಬ್ಬಂದಿಯನ್ನು ನೇಮಕಾತಿ ಮಾಡಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಪ್ರಕಾಶ್ ಹುಕ್ಕೇರಿ ತಿಳಿಸಿದರು.

ಶುಕ್ರವಾರ ಯಕ್ಸಂಬಾ ಪಟ್ಟಣದಲ್ಲಿ ಯಕ್ಸಂಬಾ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಅಂಕಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ಸಲುವಾಗಿ 2 ಜನ ಎಂಬಿಬಿಎಸ್ ವೈದ್ಯಾಧಿಕಾರಿಗಳು, 6 ಜನ ನರ್ಸ್‌ಗಳು ಹಾಗೂ 6 ಜನ ಡಿ-ಗ್ರೂಪ್ ಸೇರಿ ಒಟ್ಟು 14 ಜನ ಸಿಬ್ಬಂದಿಯನ್ನು ಶ್ರೀ ಅನ್ನಪೂರ್ಣೇಶ್ವರಿ ಫೌಂಡೇಶನ್ ವತಿಯಿಂದ ನೇಮಕಾತಿ ಮಾಡಿಕೊಂಡು ಆರೋಗ್ಯ ಕೇಂದ್ರಗಳಲ್ಲಿ ಈ ಹೊತ್ತಿನಿಂದ ಸೇವೆ ಸಲ್ಲಿಸಲು ಸೂಚಿಸಿದ್ದೇನೆ ಎಂದು ಮಾಜಿ ಸಚಿವ ಪ್ರಕಾಶ್ ಹುಕ್ಕೇರಿ ಈಟಿವಿ ಭಾರತಕ್ಕೆ ತಿಳಿಸಿದರು.

Last Updated : May 7, 2021, 9:16 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.