ಬೆಳಗಾವಿ/ಅಥಣಿ: ಅಥಣಿಯಲ್ಲಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಮಾಜಿ ಶಾಸಕ ಶಹಜಾನ್ ಡೊಂಗರಗಾಂವ್ ಕಣಕ್ಕಿಳಿದಿದ್ದು, ಕಾಂಗ್ರೆಸ್ಗೆ ಶಾಕ್ ನೀಡಿದ್ದಾರೆ.
ಈ ಮೊದಲೇ ಇಬ್ಬರು ಸೂಚಕರೊಂದಿಗೆ ನಾಮಪತ್ರ ಸಲ್ಲಿಕೆ ಮಾಡಿದ್ದ ಶಹಜಾನ್, ಇಂದು ಮತ್ತೆ 11 ಜನ ಸೂಚಕರ ಜೊತೆಗೆ ನಾಮಪತ್ರ ಸಲ್ಲಿಕೆ ಮಾಡುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಬಿಸಿ ಮುಟ್ಟಿಸಿದ್ದಾರೆ. ಅಥಣಿ ನಗರದ ಸಿದ್ದೇಶ್ವರ ದೇಗುಲದಲ್ಲಿ ನಾಮಪತ್ರಕ್ಕೆ ಪೂಜೆ ಸಲ್ಲಿಸಿದ ನಂತರ ನೂರಕ್ಕೂ ಅಧಿಕ ಕಾರ್ಯಕರ್ತರ ಜೊತೆಗೆ ಬೈಕ್ ಮೂಲಕ ತೆರಳಿ ಚುನಾವಣಾಧಿಕಾರಿ ಜೆಲಾನಿ ಮೊಕಾಶಿಗೆ ನಾಮಪತ್ರ ಸಲ್ಲಿಕೆ ಮಾಡಿದರು.
ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಶಹಜಹಾನ್ ಡೊಂಗರಾಂವ್, ನಾನು ಬಂಡಾಯವಾಗಿ ಕಣಕ್ಕೆ ಇಳಿಯುತ್ತಿಲ್ಲ. ನಮ್ಮ ಕಾರ್ಯಕರ್ತರು, ಬೆಂಬಲಿಗರ ಒತ್ತಾಯದ ಮೇರೆಗೆ ಕಣಕ್ಕೆ ಇಳಿಯುತ್ತಿದ್ದೇನೆ. ಪಕ್ಷ ಬಿ ಫಾರಂ ನೀಡುವ ವಿಶ್ವಾಸವಿದೆ. ಬಿ ಫಾರಂ ಸಿಗದೆ ಹೋದ್ರೆ, ಕಾರ್ಯಕರ್ತರು ಒಪ್ಪಿದರೇ ಸ್ವತಂತ್ರವಾಗಿ ಸ್ಪರ್ಧೆಗೆ ಇಳಿಯಲು ಸಿದ್ಧ ಎಂದರು.