ETV Bharat / state

ಶಾಸಕಿ ಹೆಬ್ಬಾಳ್ಕರ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಮಾಜಿ ಶಾಸಕ

ಮಾಜಿ ಶಾಸಕ ಸಂಜಯ್ ಪಾಟೀಲ್, ಶಾಸಕಿ ​​ಲಕ್ಷ್ಮಿ ಹೆಬ್ಬಾಳ್ಕರ್‌ ವಿರುದ್ಧ ಗುಡುಗಿದ್ದು, ಅವರ ಬಗ್ಗೆ ಬೆಳಗಾವಿಯಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

Sanjay Patil
ಸಂಜಯ್ ಪಾಟೀಲ್​
author img

By

Published : Sep 30, 2021, 10:43 AM IST

Updated : Sep 30, 2021, 11:24 AM IST

ಬೆಳಗಾವಿ: ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ - ಕಾಂಗ್ರೆಸ್ ರೋಡ್ ಪಾಲಿಟಿಕ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಸಂಜಯ್ ಪಾಟೀಲ್ ನಾಲಿಗೆ ಹರಿಬಿಟ್ಟಿದ್ದಾರೆ. ಶಾಸಕಿ ​​ಲಕ್ಷ್ಮಿ ಹೆಬ್ಬಾಳ್ಕರ್‌ ವಿರುದ್ಧ ವಾಗ್ದಾಳಿ ನಡೆಸಿದರು.

ಮಾಜಿ ಶಾಸಕ ಸಂಜಯ್ ಪಾಟೀಲ್

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಸತ್ಯ ಎದುರಿಸುವ ಶಕ್ತಿ ಇನ್ನೂ ಬರುತ್ತಿಲ್ಲ. ಎಂಎಲ್​ಎ ಆಗುವುದಕ್ಕೂ ಮೊದಲು ನಾನು ನಿಮ್ಮ ಮಗಳು, ವಿವಿಧ ಕೆಲಸಗಳನ್ನು ಮಾಡುವುದಾಗಿ ಭರವಸೆ ನೀಡಿದ್ದರು. ಇದಕ್ಕೆ ಜನರು ಪ್ರತಿಕ್ರಿಯೆ ನೀಡುತ್ತಿದ್ದಾರೆ. ಅದಕ್ಕೆ ಬಿಜೆಪಿ ಮೇಲೆ ಆರೋಪ ಹೊರಿಸುತ್ತಿದ್ದಾರೆ ಎಂದು ಹೆಬ್ಬಾಳ್ಕರ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನೀವು ಕೆಲಸ ಮಾಡಿಲ್ಲ ಅಂತ ನಾನು ಹೇಳ್ತಿಲ್ಲ. ಸಂವಿಧಾನದ ಪ್ರಕಾರ ಪ್ರತಿಯೊಬ್ಬ ಶಾಸಕರು, ಸಂಸದರಿಗೆ ಕೆಲವೊಂದು ಅವರದ್ದೇ ಆದ ಕೆಲಸಗಳಿವೆ. ಅವುಗಳನ್ನು ನಿರ್ವಹಿಸುತ್ತಾರೆ. ಬಿಜೆಪಿ ಕಾಂಗ್ರೆಸ್​​ ರೀತಿ ಹೊಲಸು ರಾಜಕೀಯ ಮಾಡೋದಿಲ್ಲ. ಜನರು ಟೀಕೆ ಮಾಡೋದನ್ನು ಲಕ್ಷ್ಮಿ ಹೆಬ್ಬಾಳ್ಕರ್​​ಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಬಿಜೆಪಿ ಮೇಲೆ ಸಿಟ್ಟು ತೋರಿಸುತ್ತಿದ್ದಾರೆ. ಅವರಿಗೆ ಟೀಕೆ-ಟಿಪ್ಪಣಿಗಳನ್ನು ಸಹಿಸಿಕೊಳ್ಳುವ ಶಕ್ತಿ ಬರಲಿ ಎಂದು ವ್ಯಂಗ್ಯವಾಡಿದರು.

ಇದನ್ನೂ ಓದಿ: ರಾಜ್ಯದಲ್ಲಿ ನಾಳೆಯಿಂದ 3 ದಿನ ಭಾರಿ ಮಳೆ ಸಾಧ್ಯತೆ.. ಯೆಲ್ಲೋ ಅಲರ್ಟ್ ಘೋಷಣೆ

Last Updated : Sep 30, 2021, 11:24 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.